Sunday, November 24, 2024
Homeಸುದ್ದಿಗಳುರಾಜ್ಯನವೆಂಬರ್ 1ಕ್ಕೆ ಅಪ್ಪುಗೆ 'ಕರ್ನಾಟಕ ರತ್ನ' ಪ್ರದಾನ; ರಜನಿಕಾಂತ್, ಐಶ್ವರ್ಯಾ ರೈ ಬರುವ ನಿರೀಕ್ಷೆ

ನವೆಂಬರ್ 1ಕ್ಕೆ ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ; ರಜನಿಕಾಂತ್, ಐಶ್ವರ್ಯಾ ರೈ ಬರುವ ನಿರೀಕ್ಷೆ

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿ ಅನೇಕ ತಿಂಗಳಾಗಿದೆ. ಇದೀಗ ಪ್ರಶಸ್ತಿ ಪ್ರದಾನ ಮಾಡುವ ಮಾಡುವ ಸಮಯ ಹತ್ತಿರ ಬಂದಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರರಂಗದ ಗಣ್ಯ ವ್ಯಕ್ತಿಗಳು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಮೂಲದ ದೊಡ್ಡ ದೊಡ್ಡ ಕಲಾವಿದರು ಭಾಗವಹಿಸುವ ಸಾಧ್ಯತೆ ಇದೆ.  ಸೂಪರ್ ಸ್ಟಾರ್ ರಜನಿಕಾಂತ್, ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ , ದೀಪಿಕಾ ಪಡುಕೋಣೆ ಕರೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

‘ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ’ ಎಂದು ಸಿಎಂ ಹೇಳಿದರು.

RELATED ARTICLES
- Advertisment -spot_img

Most Popular