Friday, March 21, 2025
Homeಸುದ್ದಿಗಳುದೇಶPM Kisan | ನಾಳೆ ರೈತರ ಖಾತೆಗೆ ಸಂದಾಯವಾಗಲಿದೆ ಪಿಎಂ ಕಿಸಾನ್ ಹಣ.

PM Kisan | ನಾಳೆ ರೈತರ ಖಾತೆಗೆ ಸಂದಾಯವಾಗಲಿದೆ ಪಿಎಂ ಕಿಸಾನ್ ಹಣ.

ಆಗಸ್ಟ್‌ನಲ್ಲಿ ಬಿಡುಗಡೆಯಾಗಬೇಕಾಗಿದ್ದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (PM Kisan) ಯೋಜನೆಯ ಸಹಾಯಧನದ 12ನೇ ಕಂತಿನ 2,000 ರೂ.ಗಳನ್ನು ಸೋಮವಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದು ರೈತರಿಗೆ ಕೇಂದ್ರ ಸರ್ಕಾರಡು ನೀಡುತ್ತಿರುವ ದೀಪಾವಳಿ ಗಿಫ್ಟ್!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿಯ (PM Kisan) 12ನೇ ಕಂತಿನ ಹಣವನ್ನು ಸೋಮವಾರ (ಅ.17) ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ 2,000 ರೂ. ಹಣ ಸಂದಾಯವಾಗಲಿದ್ದು, ಇದು ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿರುವ ದೀಪಾವಳಿಗಿಫ್ಟ್

 

16,000 ಕೋಟಿ ರೂ.ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಹಂಚಲಾಗುತ್ತದೆ. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ಈ ವಿಷಯವನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ತಿಳಿಸಿದ್ದಾರೆ.

 

ಸೋಮವಾರದಿಂದ ಎರಡು ದಿನಗಳ ಕಾಲ ‘ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ-2022’ ನಡೆಯಲಿದ್ದು, ಇದನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಇದೇ ಸಂರ್ಭದಲ್ಲಿ ರಸಗೊಬ್ಬರ ಖಾತೆಯು ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಆರಂಭಿಸುತ್ತಿರುವ 600ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನೂ ಉದ್ಘಾಟಿಸಲಿದ್ದಾರೆ. ರೈತರೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.

 

ಇದು ಕೃಷಿ ಸಮ್ಮಾನ್ ನಿಧಿಯ 12ನೇ ಕಂತಿನ ಹಣವಾಗಿದ್ದು, ಕಳೆದ ಆಗಸ್ಟ್‌ನಲ್ಲಿಯೇ ಈ ಕಂತನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಮುಂದೂಡುತ್ತಾ ಬಂದಿತ್ತು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗ ಈ ಹಣವನ್ನು ಬಿಡಗಡೆ ಮಾಡಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ದೇಶದ ಸುಮಾರು 8ಕೋಟಿ ರೈತರು ಇದರ ಲಾಭ ಪಡೆಯಲಿದ್ದಾರೆ. ಈ ನಿಧಿಯನ್ನು ಪಡೆಯಬೇಕಾದರೆ ರೈತರು ಇ-ಕೆವೈಸಿ ಮಾಡಿಸಿರಬೇಕಾದದು ಕಡ್ಡಾಯ ಎಂದು ಈಗಾಗಲೇ ಪ್ರಕಟಿಸಲಾಗಿದೆ. ಇ-ಕೆವೈಸಿ ಮಾಡಿಸಿರುವ ರೈತರ ಖಾತೆಗಳಿಗೆ ಮಾತ್ರ ಈ ಬಾರಿ ಹಣ ಸಂದಾಯವಾಗಲಿದೆ.

RELATED ARTICLES
- Advertisment -spot_img

Most Popular