Monday, April 21, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಪ್ರಜಾಧ್ವನಿ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಮೂವತ್ತು ಸಾವಿರ ಜನ ; ಜಿಲ್ಲಾ ಕಾಂಗ್ರೆಸ್ ಮುಖಂಡ...

ಸಕಲೇಶಪುರ : ಪ್ರಜಾಧ್ವನಿ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಮೂವತ್ತು ಸಾವಿರ ಜನ ; ಜಿಲ್ಲಾ ಕಾಂಗ್ರೆಸ್ ಮುಖಂಡ ಪಟೇಲ್ ಶಿವರಾಮ್

ಸಕಲೇಶಪುರ : ರಾಜ್ಯ ಬಿಜೆಪಿ ಸರಕಾರದ ದುರಾಡಳಿತವನ್ನು ರಾಜ್ಯದ ಜನರ ಮುಂದಿಡಲು ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ ಬಸ್ ಯಾತ್ರೆ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡ ಕ್ಷೇತ್ರದ ಯಾತ್ರೆ ಉಸ್ತುವಾರಿ ಪಟೇಲ್ ಶಿವಣ್ಣ ಹೇಳಿದರು.

ಕೆಪಿಸಿಸಿ ಸಕಲೇಶಪುರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರಜಾ ಧ್ವನಿಯಾತ್ರೆಯೂ ರಾಜ್ಯ ದ ಹಲವು ಜಿಲ್ಲೆಗೆ ಸಂಚರಿಸಿದ್ದು, ಜನವರಿ ೨೧ರಂದು ಜಿಲ್ಲೆಯಲ್ಲಿ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮ ದಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಸಾರ್ವಜನಿಕರು ಹಾಗೂ ಕಾರ್ಯ ಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು ಸಭೆ ಯಶಸ್ವಿಯಾಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಜಿಲ್ಲಾ ಕೆಪಿಸಿಸಿ ತಯಾರಿ ನಡೆಸಲು ಮುಖಂಡರು ನನಗೆ ಜವಾಬ್ದಾರಿ ನೀಡಿದ್ದಾರೆ.   ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪಸಿಂಗ್‌ ಸುರ್ಜೆವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲ ನಾಯಕರು ಒಂದೇ ಬಸ್‌ ಹತ್ತಲಿದ್ದು, ಜಿಲ್ಲೆಯಲ್ಲಿ ಪಕ್ಷದ  ಒಗ್ಗಟ್ಟನ್ನು  ಪ್ರದರ್ಶಿಸುವ ಅವಕಾಶ ದೊರೆತಿದೆ ಎಂದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಡಿ ಮಲ್ಲೇಶ್,
ಸದಸ್ಯ ಸಲೀಮ್ ಕೊಲ್ಲಹಳ್ಳಿ, ಕೃಷ್ಣೇಗೌಡ,,  ಸಿದ್ದರಾಮಯ್ಯ ಅಭಿಮಾನಿ ವೇದಿಕೆಯ ಕಾರ್ ಮಲ್ಲೇಶ್, ಖಾಸೀಮ್ ಗುಲಗಳಲೆ

RELATED ARTICLES
- Advertisment -spot_img

Most Popular