ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ತಾಲೂಕು ಆಡಳಿತ ವಿನಾಕಾರಣ ಅಡ್ಡಿ: ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಸ್ಥಳವಕಾಶ ನೀಡುವಂತೆ ಒತ್ತಾಯಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಪ್ರತಿಭಟನೆ
ಸಕಲೇಶಪುರ: ಪಟ್ಟಣದ ಹೊಸಬಸ್ ನಿಲ್ದಾಣದ ಎದುರಿಗಿನ ತಾ.ಪಂಗೆ ಸೇರುವ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡುವಂತೆ ಈ ಹಿಂದೆಯೆ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದು ಆದರೆ ಸದರಿ ಜಾಗದಲ್ಲಿ ಪ್ರತಿಮೆ ನಿರ್ಮಾಣ ಮಾಡಲು ತಾಲೂಕು ಆಡಳಿತ ಅಡ್ಡಗಾಲು ಹಾಕುತ್ತಿರುವುದು ಖಂಡನೀಯ, ಕೂಡಲೆ ಹೊಸ ಬಸ್‌ನಿಲ್ದಾಣದ ಎದುರಿಗಿನ ಜಾಗವನ್ನು ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡಬೇಕೆಂದು ಆಗ್ರಹಿಸಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಲಾಯಿತು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಎಂ ವಿಶ್ವನಾಥ್ ಮಾತನಾಡಿ ತಾಲೂಕಿನಲ್ಲಿ ಸಾವಿರಾರು ಎಕರೆ ಜಾಗ ಒತ್ತುವರಿಯಾಗಿದ್ದು ಆದರೆ ಒಕ್ಕಲಿಗರ ಸಂಘದ ವತಿಯಿಂದ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ 5 ಗುಂಟೆ ಜಾಗ ಮಂಜೂರು ಮಾಡುವುದಕ್ಕೆ ಅಡ್ಡಿ ಉಂಟು ಮಾಡುವುದು ಎಷ್ಟು ಸರಿ? ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿತ್ತಿದ್ದು ಕೆಂಪೇಗೌಡರ ಜನ್ಮ ದಿನಾಚರಣೆ ದಿನ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದರು.ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಜೆಡಿಎಸ್ ಮುಖಂಡರುಗಳಾದ ಸಚ್ಚಿನ್ ಪ್ರಸಾದ್, ಸುಪ್ರದೀಪ್ತ ಯಜಮಾನ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಸೇರಿದಂತೆ ಇತರ ಗಣ್ಯರು ಹಾಜರಿದ್ದರು.