ಸಕಲೇಶಪುರ: ಭೂಮಿ ಹಕ್ಕುಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ _8 ದಿನಗಳಿಂದ ದಲಿತ ಸಂಘರ್ಷ ಸಮಿತಿ , ಕರ್ನಾಟಕ (ರಿ) ವತಿಯಿಂದ ಮಾಡುತ್ತಿರುವ ನಿರಂತರ ಪ್ರತಿಭಟನೆ ಸೋಮವಾರ ಸಂಜೆ ಮುಕ್ತಾಯಗೊಂಡಿತು.
ಪಟ್ಟಣದ ಮಿನಿವಿಧಾನಸೌದ ಆವರಣದಲ್ಲಿ ಸೋಮವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ವಳಲಹಳ್ಳಿ ವೀರೇಶ್ ಮಾತನಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಕಳೆದ 7 ದಿನಗಳಿಂದ ನಡೆಯುತ್ತಿರುವ ಧರಣಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅರ್ಚನಾ ಭಾನುವಾರ ನಮ್ಮನ್ನು ಭೇಟಿ ಮಾಡಿ ಸ್ಥಳೀಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟನೆಯ ಮುಖಂಡರೊಂದಿಗೆ ಚರ್ಚಿಸಿ ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ ಎಂದರು.
ಸಂಘಟನೆಯ ತಾಲೂಕು ಸಂಚಾಲಕ ಮೋಹನ್ ಕುಮಾರ್ ಅಚ್ವರಡಿ ಮಾತನಾಡಿ ಕಳೆದ ಒಂದು ವಾರದಿಂದ ನಡೆದ ಧರಣಿಯಲ್ಲಿ ಸುಮಾರು 480 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ನಮ್ಮ ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ಶಾಸಕ ಎಚ್.ಕೆ ಕುಮಾರಸ್ವಾಮಿ, ಮಾಜಿ ಶಾಸಕ ಎಚ್.ಎಂ ವಿಶ್ವನಾಥ್, ಪುರಸಭಾ ಅಧ್ಯಕ್ಷ ಕಾಡಪ್ಪ, ಮಾಜಿ ತಾ.ಪಂ ಸದಸ್ಯರುಗಳಾದ ಯಡೇಹಳ್ಳಿ ಮಂಜುನಾಥ್, ಸಿಮೆಂಟ್ ಮಂಜುನಾಥ್ ಸೇರಿದಂತೆ ಇನ್ನು ಹಲವು ಮುಖಂಡರುಗಳು, ರೈತಪರ ಹಾಗೂ ಪ್ರಗತಿಪರ ಸಂಘಟನೆಗಳು ನಮ್ಮ ಹೋರಾಟದಲ್ಲಿ ಭಾಗಿಯಾಗಿದ್ದು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರುಗಳಾದ ಬೆಳಗೋಡು ಬಸವರಾಜ್, ಹೆನ್ರಿ ಹಾಜರಿದ್ದರು.
ಪ್ರವಾಸಿ ಮಂದಿರದಲ್ಲಿ ಮುಖಂಡರ ಜೊತೆ ಸಭೆ ನಡೆಸಿದ ಅವರು ದಸಂಸದ ಬಹುತೇಕ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು ಈ ಹಿನ್ನೆಲೆಯಲ್ಲಿ ಸೋಮವಾರ ಅನಿರ್ದಿಷ್ಟ ಅವಧಿಯ ಧರಣಿ ಸತ್ಯಾಗ್ರಹ ಬಹುತೇಕವಾಗಿ ಮುಕ್ತಾಯವಾಗುವ ಸಾಧ್ಯತೆಯಿದೆ.ಕಳೆದ ಒಂದು ವಾರದಿಂದ ನಡೆಯುತ್ತಿರುವ ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಖುದ್ದು ಶಾಸಕ ಎಚ್.ಕೆ ಕುಮಾರಸ್ವಾಮಿ ಮನವಿ ಮಾಡಿದರು ಪ್ರತಿಭಟನೆ ಹಿಂಪಡೆದಿರಲಿಲ್ಲ.ಇದೀಗ ಜಿಲ್ಲಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಸೋಮವಾರ ಮದ್ಯಾಹ್ನದ ವೇಳೆಗೆ ಪ್ರತಿಭಟನೆ ಹಿಂಪಡೆಯುವ ಬಹುತೇಕ ಸಾಧ್ಯತೆಯಿದೆ ಎಂದು ಸಂಘಟನೆಯ ತಾಲೂಕು ಸಂಚಾಲಕ ಮೋಹನ್ ಕುಮಾರ್ ಅಚ್ಚರಡಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಪ್ರತೀಕ್ ಬಾಯಲ್ ಕೂಡಾ ಉಪಸ್ಥಿರಿದ್ದರು.
ಜಿಲ್ಲಾ ದಸಂಸದ ಅಧ್ಯಕ್ಷರಾದ ವಲಳಹಳ್ಳಿ ವೀರೇಶ್, ಮುಖಂಡರುಗಳಾದ ಬೆಳಗೋಡು ಬಸವರಾಜು, ಜಯಕುಮಾರ್ ಹಾದಿಗೆ, ಹೆನ್ರಿ ಕಾಕನಮನೆ, ಜಗನ್ನಾಥ ಸಣ್ಣಪ್ಪ, ಎ.ಇ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
Attachments area