Monday, November 25, 2024
Homeಸುದ್ದಿಗಳುರಾಜ್ಯರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ; 67 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ; 67 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ

 

ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಢಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ.

ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಾಗಿ ಇದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, ತೆರೆಮರೆಯಲ್ಲಿದ್ದ ಅರ್ಹ ಸಾಧಕರು, ಸಮಾಜದ ಹಿತಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಹತ್ತು ಸಂಘ-ಸಂಸ್ಥೆಗಳನ್ನು ಸರಕಾರ ಗುರುತಿಸಿದೆ. ಸಾಧಕರನ್ನು ರಾಜ್ಯೋತ್ಸವ ಆಯ್ಕೆ ಸಮಿತಿ ಹಾಗೂ ಸರಕಾರವೇ ಗುರುತಿಸಿ ನೀಡಿರುವುದು ಈ ಬಾರಿಯ ವಿಶೇಷ.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಆದಾಗಿಯೂ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪಟ್ಟಿಯಲ್ಲಿರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದ್ದು, ಒಟ್ಟಾರೆಯಾಗಿ ಸಮತೂಕದ ಪಟ್ಟಿ ಸಿದ್ದಗೊಂಡಿದೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಢಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

RELATED ARTICLES
- Advertisment -spot_img

Most Popular