Saturday, November 23, 2024
Homeಸುದ್ದಿಗಳುಸಕಲೇಶಪುರರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿಭಾ ಡೇ: ಗಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು: ಸಾವಿರಾರು...

ರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿಭಾ ಡೇ: ಗಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು: ಸಾವಿರಾರು ಪೋಷಕರು ಕಾರ್ಯಕ್ರಮದಲ್ಲಿ ಭಾಗಿ


ಸಕಲೇಶಪುರ: ಪಟ್ಟಣದ ರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ನಡೆದ ಪ್ರತಿಭಾ ಡೇ ಕಾರ್ಯಕ್ರಮಕ್ಕೆ ಎ.ಎಸ್.ಪಿ ಮಿಥುನ್ ಚಾಲನೆ ನೀಡಿ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಪಾತ್ರದ ಕುರಿತು ಮಾತನಾಡಿದರು.

ಪ್ರತಿಭಾ ಡೇ ಮೊದಲ ದಿನ ಎಲ್.ಕೆ.ಜಿ ಯಿಂದ ನಾಲ್ಕನೇ ತರಗತಿ ವರೆಗಿನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಮೊದಲ ದಿನದ ಕಾರ್ಯಕ್ರಮಕ್ಕೆ ಇತರ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ್, ರೋಟರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಅಧ್ಯಕ್ಷ ಶಶಿಧರ್ , ರೋಟರಿ ಟ್ರಸ್ಟ್ ಅಧ್ಯಕ್ಷ ರಜನಿಕಾಂತ್, ಶಾಲೆಯ ಪ್ರಾಂಶುಪಾಲ ಸುಮಂತ್ ಭಾರ್ಗವ್,ಮುಖ್ಯೋಪಾಧ್ಯಾಯ ರುದ್ರೇಶ್, ಮುಖ್ಯ ಶಿಕ್ಷಕಿ ಪುಷ್ಪಾ ಪೊನ್ನಪ್ಪ, ಮುಖ್ಯ ಶಿಕ್ಷಕಿ ರತ್ನಾ ಮುಂತಾದವರು ಹಾಜರಿದ್ದರು.ಮೊದಲ ದಿನ ಪುಟಾಣಿಗಳ ಸಾಂಸ್ಕ್ರತಿಕ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಸಾವಿರಾರು ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಕ್ಕಳ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಸಂಭ್ರಮಿಸಿದರು.ಎರಡನೇ ದಿನ ಐದನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

RELATED ARTICLES
- Advertisment -spot_img

Most Popular