ಬಿಜೆಪಿ ಸದಸ್ಯತ್ವ ನೋಂದಣಿ ಸಂಖ್ಯೆ ಹೆಚ್ಚಳಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ ಗೌಡ
ಸಕಲೇಶಪುರ : ದೇಶದ್ಯಂತ ಭಾರತೀಯ ಜನತಾ ಪಾರ್ಟಿಯಿಂದ ಸದಸ್ಯತ್ವ ಅಭಿಯಾನ ಬಿರುಸಿನಿಂದ ಕೂಡಿದ್ದು ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚಿಗೆ ಮಾಡಲು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.
ಸದಸ್ಯತ್ವ ಅಭಿಯಾನ 2024 ರ ಮೈಸೂರು ವಿಭಾಗದ ಉಸ್ತುವಾರಿಯಾಗಿರುವ ಪ್ರೀತಮ್ ಗೌಡ ರವರು ಕ್ಷೇತ್ರದ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಮಹಾ ಶಕ್ತಿ ಕೇಂದ್ರ ಶಕ್ತಿ ಕೇಂದ್ರದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು,ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ ಆದರೆ ಸದಸ್ಯತ್ವ ಅಭಿಯಾನದಲ್ಲಿ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಸದಸ್ಯತ್ವ ಸಂಖ್ಯೆ ಹೆಚ್ಚು ಮಾಡಲು ಗ್ರಾಮ ಪಂಚಾಯತಿ ವಾರು ತಂಡ ರಚನೆ ಮಾಡಬೇಕು. ರಚನೆಯಾದ ತಂಡ ಪಂಚಾಯತಿ ವ್ಯಾಪ್ತಿಯಲ್ಲಿ ಇತರೆ ಕಾರ್ಯಕರ್ತರನ್ನು ಜೋಡಿಸಿಕೊಂಡು ಮೂರು ದಿನದಲ್ಲಿ ಸದಸ್ಯತ್ವ ಸಂಖ್ಯೆ 50 ಸಾವಿರ ಗಡಿ ದಾಟಬೇಕು ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.
ಶಾಸಕ ಸಿಮೆಂಟ್ ಮಂಜು ಮಾತಾನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಡೀ ವಿಶ್ವದಲ್ಲಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ. ಆದ್ದರಿಂದ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚಿಗೆ ಮಾಡಬೇಕಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ,ರಾಜ್ಯದಲ್ಲಿ ಈಗಾಗಲೇ 36 ಲಕ್ಷಕ್ಕೂ ಹಾಗೂ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ ಹಾಸನ ಜಿಲ್ಲೆಯಲ್ಲಿ ಸಕಲೇಶಪುರ ಕ್ಷೇತ್ರದಲ್ಲಿ ಪಕ್ಷ ಸದೃಢವಾಗಿದೆ. ಆದರೆ ಸದಸ್ಯತ್ವ ನೋಂದಣಿಯಲ್ಲಿ ಇಳಿಮುಖವಾಗಿರುವುದು ಆಶ್ಚರ್ಯ ತಂದಿದೆ . ಇನ್ನು 3-4 ದಿನದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಿ ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ತೊಡಬೇಕು ಏನೂ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ಚೇತನ್, ಸಕಲೇಶಪುರ ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಆಲೂರು – ಕಟ್ಟಾಯ ಮಂಡಲ ಅಧ್ಯಕ್ಷೆ ಉಮಾ ರವಿ ಪ್ರಕಾಶ್ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.