ವಿಧಾನಪರಿಷತ್ನ ಉಪಾಸಭಾಪತಿ ಎಂ.ಕೆ ಪ್ರಾಣೇಶ್ ಹಾಗೂ ಶಾಸಕ ಸಿಮೆಂಟ್ ಮಂಜು ಅಪಘಾತದಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತನ ಭೇಟಿ
ಸಕಲೇಶಪುರ: ವಿಧಾನಪರಿಷತ್ನ ಉಪಾಸಭಾಪತಿ ಎಂ.ಕೆ ಪ್ರಾಣೇಶ್ ಹಾಗೂ ಶಾಸಕ ಸಿಮೆಂಟ್ ಮಂಜು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ತಾಲೂಕಿನ ಬಿಜೆಪಿ ಕಾರ್ಯಕರ್ತನನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ತಾಲೂಕಿನ ಹಾನುಬಾಳು ಮಹಾಶಕ್ತಿ ಕೇಂದ್ರದ ಬಿಜೆಪಿ ಅಧ್ಯಕ್ಷರಾದ ಹರೀಶ್ ಜಂಬರಡಿ ಎಂಬುವರು ಪಟ್ಟಣಕ್ಕೆ ತಮ್ಮ ಸ್ನೇಹಿತ ಕ್ಯಾಮನಹಳ್ಳಿ ಗ್ರಾ.ಪಂ ಸದಸ್ಯ ಆಕಾಶ್ ಎಂಬುವರ ಜೊತೆ ಶನಿವಾರ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಾಟೆಗುಂಡಿ ತಿರುವಿನಲ್ಲಿ ಮಾರುತಿ ಕಾರೊಂದು ಏಕಾಏಕಿ ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹರೀಶ್ರವರ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಹಾಸನದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ಮಾಡಿದ ವಿಧಾನಪರಿಷತ್ನ ಉಪಾಸಭಾಪತಿ ಎಂ.ಕೆ ಪ್ರಾಣೇಶ್ ಹಾಗೂ ಶಾಸಕ ಸಿಮೆಂಟ್ ಮಂಜು ಗಾಯಾಳುವಿನ ಕುಟುಂಬಕ್ಕೆ ಧೈರ್ಯ ತುಂಬಿ ಗಾಯಾಳುವಿನ ಚಿಕಿತ್ಸೆಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಹೇಳಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಕ್ಯಾಮನಹಳ್ಳಿ ರಾಜ್ ಕುಮಾರ್ ಉಪಸ್ಥಿತರಿದ್ದರು.