76ನೇ ಗಣ ರಾಜ್ಯೋತ್ಸವ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿದ ರಾಜ್‌ಕುಮಾರ್ ಹಾಗೂ ಪವಿತ್ರಾ ದಂಪತಿ
ಸಕಲೇಶಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹುರುಡಿಯ ಕಾಫಿ ಬೆಳೆಗಾರ ಹಾಗೂ ಉದ್ಯಮಿ ರಾಜ್‌ಕುಮಾರ್ ಹಾಗೂ ಪವಿತ್ರಾ ದಂಪತಿಗಳು ಸುಮಾರು 1,40,000ರೂಗಳ ಧನ ಸಹಾಯ ಮಾಡುವ ಮುಖಾಂತರ ಪ್ರತಿಬಾನ್ವಿತ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನ ರೂಪಿಸಿಕೊಳ್ಳಲು ನೆರವಾಗಿದ್ದಾರೆ.
ಪಟ್ಟಣದ ಸುಭಾಷ್ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಸಿಮೆಂಟ್ ಮಂಜುರವರ ಉಪಸ್ಥಿತಿಯಲ್ಲಿ ಹಣವನ್ನು ವಿತರಿಸಿದರು. ಈ ಸಂದರ್ಭದಲ್ಲಿ ರಾಜ್‌ಕುಮಾರ್ ಹಾಗೂ ಪವಿತ್ರಾ ದಂಪತಿಗಳು ಮಾತನಾಡಿ ಮಲೆನಾಡಿನ ಪ್ರತಿಬಾನ್ವಿತರಿಗೆ ನೆರವು ನೀಡುವ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಅಂಕವನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೆರವು ನೀಡುತ್ತೇವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ರಾಜ್‌ಕುಮಾರ್ ಹಾಗೂ ಪವಿತ್ರಾ ದಂಪತಿಗಳನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.