Tuesday, January 21, 2025
Homeಕ್ರೈಮ್ಹೊಸ ವರ್ಷ ಸಂಭ್ರಮಾಚರಣೆ ವೇಳೆ ಅವಘಡ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು ಮುಳುಗಿ ಇಬ್ಬರು...

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಅವಘಡ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು ಮುಳುಗಿ ಇಬ್ಬರು ಯುವಕರು ಸಾವು

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಅವಘಡ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು 

ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆಯ ಏರಿ ಮೇಲೆ ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.

ಅರೇಹಳ್ಳಿ ಹೋಬಳಿಯ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆಯ ಏರಿ ಮೇಲೆ ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ನೂತನ ವರ್ಷದ ಸಂಭ್ರಮಾಚರಣೆ ಮಾಡಲು ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಇಬ್ಬರು ಯುವಕರು ಪಾರ್ಟಿ ಮಾಡಿರುತ್ತಾರೆ. ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅವರನ್ನು ಹುಡುಕಾಡಿದ ಸಂದರ್ಭದಲ್ಲಿ ಕೆರೆಯ ಏರಿ ಮೇಲೆ ಚಪ್ಪಲಿ ಹಾಗೂ ಮಧ್ಯದ ಬಾಟಲು ಕಂಡು ಬಂದಿರುತ್ತದೆ. ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿರುತ್ತಾರೆ. 

  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹರ ಸಾಹಸಪಟ್ಟು ಸಂಜೆ 6:00 ಸಮಯದಲ್ಲಿ ಮೃತ ದೇಹಗಳನ್ನು ಹೊರಗೆ ತೆಗೆದಿರುತ್ತಾರೆ. ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ ( 30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುತ್ತಾರೆ. ಈ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

RELATED ARTICLES
- Advertisment -spot_img

Most Popular