Monday, March 17, 2025
Homeಸುದ್ದಿಗಳುಸಕಲೇಶಪುರಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ವೀಕ್ಷಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಪ್ರಜ್ವಲ್...

ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ವೀಕ್ಷಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣ

ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ವೀಕ್ಷಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣ

ಸಕಲೇಶಪುರ: ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯನ್ನು ಸಂಸದ ಪ್ರಜ್ವಲ್ ರೇವಣ್ಣ ವೀಕ್ಷಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಸೂಚನಾ ಫಲಕಗಳನ್ನು ಹಾಕದಿರುವದರಿಂದ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ ಕೂಡಲೇ ಸೂಚನಾ ಫಲಕಗಳನ್ನು ಅಳವಡಿಸಿಕೊಂಡು ಎಲ್ಲಾ ರೀತಿಯ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರ. ಪಾಳ್ಯದ ಕಣದಹಳ್ಳಿ ಗ್ರಾಮದಿಂದ ಮಗ್ಗೆ ಕಡೆಗೆ ಹೋಗಲು ಪ್ಲೈ ಓವರ್ ಮಾಡದಿರುವುದರಿಂದ ಸಮಸ್ಯೆ ಆಗಿದೆ ಇಲ್ಲೇ ಫ್ಲೈ ಓವರ್ ಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಸಂಸದರಿಗೆ ಮನವಿ ಸಲ್ಲಿಸಿದರು. ಶಾಸಕ ಎಚ್.ಕೆ ಕುಮಾರಸ್ವಾಮಿ, ಆಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ಮಂಜೇಗೌಡ, ಜೆಡಿಎಸ್ ಮುಖಂಡರುಗಳಾದ ಸಚ್ಚಿನ್ ಪ್ರಸಾದ್, ಭಾಸ್ಕರ್ ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular