ಕಟ್ಟಾಯ ಹೋಬಳಿ ಬಾಚಿಹಳ್ಳಿ ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮ ಉದ್ಘಾಟನೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಸದುಪಯೋಗಕ್ಕೆ ಶಾಸಕ ಎಚ್. ಕೆ ಕುಮಾರಸ್ವಾಮಿ ಕರೆ
ಜಿಲ್ಲಾಧಿಕಾರಿಗಳ ಕಡೆ ಹಳ್ಳಿ ನಡೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಸಕಲೇಶಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಟ್ಟಾಯ ಹೋಬಳಿ ಬಾಚಿಹಳ್ಳಿ ಗ್ರಾಮದಲ್ಲಿ ನೆಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್ ಕೆ ಕುಮಾರಸ್ವಾಮಿ, ಕೆಲಸಗಳಿಗಾಗಿ ಕಚೇರಿಗೆ ಪದೇ ಪದೇ ಅಳೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರ ಸೌಲಭ್ಯಗಳನ್ನು ಹಾಗೂ ದಾಖಲೆಗಳನ್ನು ನಿಮ್ಮ ಗ್ರಾಮಕ್ಕೆ ಬಂದು ಸರಳವಾಗಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಬಾಚಿಹಳ್ಳಿ ಹಾಗೂ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ಪಡೆಯಬೇಕು ಎಂದು ಹೇಳಿದರು.
ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ, ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು.
ಸಾರ್ವಜನಿಕರು ಹಾಗೂ ರೈತ ಬಂಧುಗಳು ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ಕವಿತಾ ರಾಜರಂ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.