ಗಂಡನಿಂದಲೆ ಹೆಂಡತಿಯ ಹತ್ಯೆ: ಸಕಲೇಶಪುರದಲ್ಲೊಂದು ಭೀಕರ ಘಟನೆ
ಸಕಲೇಶಪುರ: ಕ್ಷುಲಕ ಕಾರಣಕ್ಕೆ ಗಂಡನೇ ಹೆಂಡತಿಯನ್ನು ಕೊಂದಿರುವ ಘಟನೆ ತಾಲೂಕಿನ ಜಾನೆಕೆರೆ ಗ್ರಾಮದಲ್ಲಿ ನಡೆದಿದೆ.
ಭಾಗ್ಯ (35) ಮೃತಪಟ್ಟ ದುರ್ದೈವಿಯಾಗಿದ್ದು , ಕ್ಷುಲಕ ಕಾರಣಕ್ಕೆ ಆಕೆಯ ಗಂಡ ಮಚ್ಚಿನಿಂದ ಹಲ್ಲೆ ನಡೆಸಿದ ಪರಿಣಾಮ ಭಾಗ್ಯ ಗಂಭೀರವಾಗಿ ಗಾಯಗೊಂಡಿದ್ದಾಳೆ. ನಂತರ ಚಿಕಿತ್ಸೆಗಾಗಿ ಆಂಬುಲೆನ್ಸ್ ಮುಖಾಂತರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದುವ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.