ಮೋದಿ ವಿರುದ್ಧ ಅವಳನಕಾರಿಯಾಗಿ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ.
ಡಿಕೆಶಿಯನ್ನು ಗಡಿಪಾರು ಮಾಡುವಂತೆ ಒತ್ತಾಯ
ಸಕಲೇಶಪುರ :ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಇತ್ತೀಚೆಗೆ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಬುಟ್ಟೋ ರವರ ಹೇಳಿಕೆ ಖಂಡನೀಯ, ಅವರ ಹೇಳಿಕೆ ಇದೇ ರೀತಿ ಮುಂದುವರೆದರೆ, ಮುಂದಿನ ದಿನಗಳಲ್ಲಿ ಪಕ್ಷ ಅವರ ವಿರುದ್ಧ ಉಗ್ರ ಹೋರಾಟ ನೆಡೆಸಲಾಗುವುದು ಎಂದು ಭಾರತೀಯ ಜನತಾ ಪಾರ್ಟಿಯ ತಾಲೂಕು ಅಧ್ಯಕ್ಷ ಮಂಜುನಾಥ್ ಸಂಘಿ ಹೇಳಿದರು.
ಉಗ್ರರ ಮತ್ತು ಭಯೋತ್ಪಾದಕರ ಜೊತೆ ನೆಂಟಸ್ಥಾನ ಮಾಡಲು ಹೋರಟು ಅವರ ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್‌ರವರನ್ನು ನಮ್ಮ ದೇಶದಿಂದ ಗಡಿಪಾರು ಮಾಡಬೇಕು ಮತ್ತು ಇವರ ಮೇಲೆ ಎನ್.ಐ.ಎ. ನಿಂದ ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಅಗ್ರಹಿಸಿದರು.
ಸಿಮೆಂಟ್ ಮಂಜು ಮಾತನಾಡಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಬುಟ್ಟೊ ವಿಶ್ವ ನಾಯಕರು ಆಗಿರುವ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೆಂದ್ರ ಮೊದಿಯವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರವರು ಸದಾ ಉಗ್ರವಾದವನ್ನು ಸಮರ್ಥ ನೆ ಮಾಡಿ ಕೊಳ್ಳತಿರುವುದನ್ನು ಗಮನಿಸಿದರೆ ಇವರು ಮನಸ್ಥಿತಿ ಸಮಜ ಅರ್ಥ ಮಾಡಿಕೊಳ್ಳುತಿದೆ. ಇವರಿಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಸೂಕ್ತ ಕ್ರಮಕ್ಕಾಗಿ ಉಪವಿಭಾಗಾಧಿಕಾರಿ ಆನ್ ಮುಲ್ ಜೈನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ, ಸಿಮೆಂಟ್ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂದೇಶ್, ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾದ ಮಾಸುವಳ್ಳಿ ಚಂದ್ರು, ಮಹಿಳಾ ಘಟಕದ ಅಧ್ಯಕ್ಷ ನೇತ್ರಾವತಿ ಮಂಜುನಾಥ್ ಸೇರಿದಂತೆ ಮುಂತಾದವರು ಇದ್ದರು.