ಅಥ್ಲೆಟಿಕ್ ಮೀಟ್ ನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಾಗೆ ಜೆ.ಎಸ್.ಎಸ್ ಶಾಲೆಯ ವಿದ್ಯಾರ್ಥಿಗಳು.
ಸಕಲೇಶಪುರ : ತಾಲೂಕಿನ ಬಾಗೆ ಗ್ರಾಮದ ಸಮೀಪವಿರುವ ಜೆಎಸ್ಎಸ್ ಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ ಮೀಟ್ ಕ್ರೀಡಾಕೂಟದ ವಿವಿಧ ವಿಭಾಗದಲ್ಲಿ ಜಯ ಸಾಧಿಸಿ ರಾಷ್ಟ್ರ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ 2022- 23ರ ಅಥ್ಲೆಟಿಕ್ ಮೀಟ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ನಿಸರ್ಗ ಡಿ ಸಾಲಿಯಾನ್, ಲಾಂಗ್ ಜಂಪ್ ಹಾಗೂ 80 ಮೀಟರ್ ರನ್ನಿಂಗ್ ರೇಸ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಜುನಾಥ್ ಎಚ್. ಡಿ, 80 ಮೀಟರ್ ರನ್ನಿಂಗ್ ರೇಸ್ ನಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ, ಕನಿಷ್, ಲಾಂಗ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೂ ವರುಣಿಕ, ಆಯಾಥಲನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಈ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜೆಎಸ್ಎಸ್ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.