ಹಾವು ಕಡಿತದಿಂದ ಮೃತಪಟ್ಟ ಬಾಲಕನ ಮನೆಗೆ ಭೇಟಿ ನೀಡಿದ ಶಾಸಕ ಎಚ್ ಕೆ ಕುಮಾರಸ್ವಾಮಿ.
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕರು.
ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದ ಯಶ್ವಂತ್ ಗೌರಿ ಎಂಬುವರ ಪುತ್ರ ಅಂಗನವಾಡಿ ಮುಂಭಾಗ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಹಾವು ಕಡಿದು ಮೃತಪಟ್ಟ ಹಿನೆಲೆಯಲ್ಲಿ ಇಂದು ಶಾಸಕ ಎಚ್ ಕೆ ಕುಮಾರಸ್ವಾಮಿ ಅವರು ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ವೇಳೆ ಮಾತನಾಡಿದ ಶಾಸಕರು ಹೆತ್ತೂರು ಹೋಬಳಿ ಕೇಂದ್ರದಲ್ಲಿ ಆಂಬುಲೆನ್ಸ್ ಸೇವೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸರ್ಕಾರ ಕೂಡಲೇ ಎಲ್ಲಾ ಹೋಬಳಿ ಕೇಂದ್ರದಲ್ಲಿ ತುರ್ತು ಸೇವೆಗಾಗಿ ಆಂಬುಲೆನ್ಸ್ ಗಳನ್ನು ನಿಯೋಜಿಸುವಂತೆ ಒತ್ತಾಯಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೆ ಕೂಡ ಸ್ಪಂದಿಸದೆ ಇರುವುದು ದುರದೃಷ್ಟಕರ ಸಂಗತಿ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದ್ದಾರೆ.