ಧರ್ಮಸ್ಥಳ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ
ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜ ನೆಯ ಬಾಳ್ಳುಪೇಟೆ ವಲಯದಿಂದ ಮಹಿಳಾ ಸಂಘಗಳ ಸದಸ್ಯರುಗಳಿಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪದಾ ಧಿಕಾರಿಗಳ ಪದಗ್ರಹಣ ಸಮಾರಂಭ ಕೆಂಚಮ್ಮ ಮಲ್ಲೇಗೌಡ ಸಮುದಾಯ ಭವನದಲ್ಲಿ ಗುರುವಾರ ಬೆಳಗ್ಗೆ ಜರುಗಿತು.
ಬಾಳ್ಳುಪೇಟೆ ವಲಯದ ನೂರಾರು ಜನರು ಪೂಜೆಯಲ್ಲಿ ಭಾಗವಹಿಸಿದ್ದರು. ಸತ್ಯನಾರಾಯಣ ಸ್ವಾಮಿ ಪುಜೆ ನೆರವೇರಿದ ನಂತರ ಸಭಾ ಕಾರ್ಯಕ್ರಮ ನೆಡೆಯಲ್ಲಿದ್ದು ಹಾಸನದ ತಣ್ಣೀರುಹಳ್ಳ ಮಠದ ವಿಜಯಕುಮಾರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿಲಿದ್ದಾರೆ.