ನಾಳೆ ಹೆತ್ತೂರಿನಲ್ಲಿ ನೆಡೆಯುವ ಬೆಳೆಗಾರರ ಸಮಾವೇಶಕ್ಕೆ ಸಕಲ ಸಿದ್ಧತೆ.
ಸಮಾವೇಶಕ್ಕೆ 4000 ಜನ ಸೇರುವ ನಿರೀಕ್ಷೆಯಲ್ಲಿ ಬೆಳೆಗಾರರ ಸಂಘ ಹಾಗೂ ಹೆತ್ತೂರು ಉತ್ತಮುತ್ತಲಿನ ಗ್ರಾಮಸ್ಥರು
ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿ ಕೇಂದ್ರದಲ್ಲಿ ನೆಡೆಯುವ ಬ್ರಹತ್ ಬೆಳೆಗಾರರ ಸಮಾವೇಶಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದೆ.
ಬೆಳೆಗಾರರ ಸಮಾವೇಶ ಮತ್ತು ಬಾಚಿಹಳ್ಳಿ ಪ್ರತಾಪ್ ಗೌಡರು ನಿರ್ಮಿಸಿಕೊಟ್ಟಿರುವ ನೂತನ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ಹಾಗೂ ವಾರ್ಷಿಕ ಮಹಾಸಭೆಯ ಕಾರ್ಯಕ್ರಮಕ್ಕೆ ಈಗಾಗಲೇ ಸಂಘದ ಪದಾಧಿಕಾರಿಗಳು ಹಗಲು ರಾತ್ರಿ ಎನ್ನದೆ ಶ್ರಮ ವಹಿಸಿ ನಾಳಿನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆಡೆಸಲು ತಯಾರಿ ನೆಡೆಸಿದ್ದಾರೆ.
ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಸನ ಶಾಖೆಯ ಶಂಭುನಾಥ ಸ್ವಾಮಿಯವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಿದ್ದು ಯಾವುದೇ ಲೋಪವಾಗದಂತೆ ಸಂಘಟಕರು ಈಗಾಗಲೇ ಎಚ್ಚರಿಕೆ ವಹಿಸಿದ್ದಾರೆ. ಕಾರ್ಯಕ್ರಮಕ್ಕೆ 4000 ಕ್ಕೂ ಹೆಚ್ಚು ಬೆಳೆಗಾರರು,ಸಾರ್ವಜನಿಕರು ಸೇರುವ ನಿರೀಕ್ಷೆಯಿದೆ ಬೆಳಗಾರರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ