ಬಾಳ್ಳುಪೇಟೆಯಲ್ಲಿ ಜೈ ಜನನಿ ಮಹಿಳಾ ಸಮಾಜದ ವಾರ್ಷಿಕ ಮಹಾ ಸಭೆ.
ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಬೇಕು -ಚಂಚಲ ಕುಮಾರಸ್ವಾಮಿ.
ಮಹಿಳೆಯರು ಆರ್ಥಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು – ಸಿಮೆಂಟ್ ಮಂಜುನಾಥ್.
ಸಕಲೇಶಪುರ : ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ವ್ಯವಹಾರಗಳನ್ನೂ ಸಮಾನವಾಗಿ ನಿರ್ವಹಣೆ ಮಾಡಲು ಸಾಧ್ಯ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಂಚಲ ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.
ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದ ಜೈ ಜನನಿ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು,
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಮಾತನಾಡಿ,ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸುವ ಅತ್ಯಗತ್ಯತೆ ಹಿಂದಿಗಿಂತ ಇಂದು ಮುಖ್ಯವಾಗಿದೆ. ಮಹಿಳೆ ಅಡುಗೆ ಕೆಲಸಕ್ಕೆ ಸೀಮತವಾಗದೇ ಹಲವು ಬಗೆಯ ಕೌಶಲ್ಯಗಳನ್ನು ಬೆಳೆಸಿಕೊಂಡು ವಿವಿಧ ಆರ್ಥಿಕವೃತ್ತಿಗಳಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.ಯಾವುದೇ ಸಮುದಾಯ, ಕುಟುಂಬ ಅಭಿವೃದ್ಧಿಯಾಗ ಬೇಕಾದರೆಆಸಮುದಾಯ ಮತ್ತು ಕುಟುಂಬದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಇಂದಿನ ಅತ್ಯಗತ್ಯ ಎಂದು ಹೇಳಿದರು.
ಈ ವೇಳೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜೈ ಜನನಿ ಮಹಿಳಾ ಸಮಾಜದ ಅಧ್ಯಕ್ಷ ರೂಪ ರಾಜೇಶ್, ಕರವೇ ಸ್ವಾಭಿಮಾನಿ ಸೇನೆಯ ತಾಲೂಕು ಅಧ್ಯಕ್ಷ ಸಾಗರ್ ಜಾನಕೆರೆ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ದಿನೇಶ್, ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಮುಖ್ಯಸ್ಥೆ ಕಾಂಚನ ಮಾಲಾ, ಬೆಳಗೋಡು ಹೋಬಳಿ ಕಸಾಪ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್,ಬಾಳ್ಳುಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್, ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್,ಎಂ ಸ್ವಾಮಿ, ಸಾಮಾಜಿಕ ಕಾರ್ಯಕರ್ತರಾದ ಯಡೇಹಳ್ಳಿ ಆರ್ ಮಂಜುನಾಥ್,ಬಾಗೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಮಕೃಷ್ಣ,ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನ,ಸಂಘದ ಕಾರ್ಯದರ್ಶಿ ವನಜಾಕ್ಷಿ, ಉಪಾಧ್ಯಕ್ಷೆ ಸೌಜನ್ಯ, ಖಜಾಂಚಿ ಕಲ್ಪನಾ, ಸೇರಿದಂತೆ ಸಂಘದ ನಿರ್ದೇಶಕರು, ಗ್ರಾಮಸ್ಥರು ಹಾಜರಿದ್ದರು.