ಬಾಳ್ಳುಪೇಟೆಯ ಸಿದ್ದಣ್ಣಯ್ಯ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಲಿಂಗಮರಿ ವಿಧಿವಶ.
ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆಯ ಸಿದ್ದಣ್ಣಯ್ಯ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಲಿಂಗಮರಿ ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹಲವು ವರ್ಷಗಳ ಕಾಲ ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತನಾದ ನಂತರ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಾಳ್ಳುಪೇಟೆ ಜೆಪಿ ನಗರದ ವೀರಶೈವ ಸಂಘದ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ಶಿಕ್ಷಕ ಲಿಂಗಮರಿಯವರ ಸಾವಿಗೆ ಅವರ ಶಿಷ್ಯ ವೃಂದ, ಬಂಧುಗಳು ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.