ಜೆಡಿಎಸ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ವಣಗೂರು ವ್ಯಾಪ್ತಿಯ ಕಾರ್ಯಕರ್ತರು
ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ.
ಸಕಲೇಶಪುರ : ಸಕಲೇಶಪುರ ತಾಲೂಕಿನಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದ್ದು ಇಂದು ಹೆತ್ತೂರು ಹೋಬಳಿ ವಣಗೂರು ವ್ಯಾಪ್ತಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಸಮ್ಮುಖದಲ್ಲಿ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರಲು ಯಸಳೂರು ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಡ್ರಳ್ಳಿ ಹಾಗೂ ಅವರ ತಂಡ ಸತತ ಪರಿಶ್ರಮ ವಹಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜನಪರ ಆಡಳಿತಕ್ಕೆ ಮೆಚ್ಚಿ ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಜೆಡಿಎಸ್ ಪಕ್ಷದ ಐದು ಜನ ಹಾಗೂ ಕಾಂಗ್ರೆಸ್ ಪಕ್ಷದ ಇಬ್ಬರು ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರಲು ಯಸಳೂರು ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಡ್ರಳ್ಳಿ ಹಾಗೂ ಅವರ ತಂಡ ಸತತ ಪರಿಶ್ರಮ ವಹಿಸಿತ್ತು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ತಾಲೂಕು ಅಧ್ಯಕ್ಷ ಮಂಜುನಾಥ್ ಸಂಘಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ವೇತ ಪ್ರಸನ್ನ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಂಬರಡಿ ಲೋಹಿತ್, ಸೇರಿದಂತೆ ಮುಂತಾದವರಿದ್ದರು.