ಸಕಲೇಶಪುರ : ಬೆಳಗೋಡು ಹೋಬಳಿ ಕಾಫಿ ಬೆಳೆಗಾರರ ಸಂಘದ ವಾರ್ಷಿಕ ಮಹಾ ಸಭೆ.
ಉದೇವಾರ ಗ್ರಾಮ ಪಂಚಾಯತಿ ಕಾಫಿ ಬೆಳೆಗಾರರ ಸಂಘದಿಂದ ಕಾರ್ಯಕ್ರಮ ಆಯೋಜನೆ
ಸಕಲೇಶಪುರ :- ಪ್ರಸ್ತುತ ಕಾಫಿ ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನು ನಾವುಗಳು ಮೊದಲು ಒಗ್ಗಟ್ಟು ಪ್ರದರ್ಶನ ಮಾಡಬೇಕಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಸಂಘಟನೆಗಳ ಬೆಂಬಲದೊಂದಿಗೆ ಕಾಡಾನೆ ಸಮಸ್ಯೆ ಬಗೆ ಹರಿಸಿಕೊಳ್ಳುವ ದಾರಿಯಲ್ಲಿ ಸಾಗಬೇಕು ಎಂದು ಕಾಡಾನೆ ಹಾವಳಿ ಸಂತ್ರಸ್ತರ ಹೋರಾಟ ಸಮಿತಿಯ ಮುಖಂಡ ಎಡೇಹಳ್ಳಿ ಆರ್ ಮಂಜುನಾಥ್ ಸಲಹೆ ನೀಡಿದರು.
ಇದೆ ವೇಳೆ ಕರ್ನಾಟಕ ಬೆಳೆಗಾರರ ಮಂಡಳಿಯ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಬೆಳಗೋಡು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಉಮಾನಾಥ್ ಸುವರ್ಣ, ಯತೀಶ್ ಬಾಳಗೋಡು ಸೇರಿದಂತೆ ಮುಂತಾದವರು ಇದ್ದರು.