ಬೆಳಗೋಡು -ಈಶ್ವರಹಳ್ಳಿ ಸಂಪರ್ಕ ಸೇತುವೆ ಉದ್ಘಾಟನೆ.
100 ವರ್ಷ ಇತಿಹಾಸದ ಸೇತುವೆ ಕಳೆದ ಮಳೆಗಾಲದಲ್ಲಿ ಕುಸಿದುಗೊಂಡಿತ್ತು.
ಶಾಸಕ ಎಚ್. ಕೆ ಕುಮಾರಸ್ವಾಮಿಯಿಂದ ಸೇತುವೆ ಲೋಕಾರ್ಪಣೆ.
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ, ಬೆಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಈಶ್ವರಹಳ್ಳಿ ಗ್ರಾಮದಲ್ಲಿ ನೂತನ ಸಂಪರ್ಕ ಸೇತುವೆಯನ್ನು ಶಾಸಕ ಎಚ್. ಕೆ ಕುಮಾರಸ್ವಾಮಿ ಗುರುವಾರ ಉದ್ಘಾಟನೆ ನೆರವೇರಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.
ಸುಮಾರು 1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಕೇವಲ 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆ ಗುತ್ತಿಗೆದಾರರು ಹಾಗೂ ಇಂಜಿನಿಯರ್ ಗಳ ಶ್ರಮಕ್ಕೆ ಶಾಸಕರು ಶ್ಲಾಘನೇ ವ್ಯಕ್ತಪಡಿಸಿದರು.
ಬೆಳಗೋಡು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಸುಮಾರು 18 ಕೋಟಿ ರೂ ನಷ್ಟು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಇದರಲ್ಲಿ ಈಗಾಗಲೇ ಹಲವು ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಕಾಮಗಾರಿ ನೆಡೆಯುತ್ತಿದೆ ಎಂದು ತಿಳಿಸಿದರು.
ಈಶ್ವರಹಳ್ಳಿ ಗ್ರಾಮಕ್ಕೆ ಶಾಸಕರು ಸಾಕಷ್ಟು ಅನುದಾನ ನೀಡಿದ್ದು ಸಿ. ಸಿ ರಸ್ತೆ, ಅಂಗನವಾಡಿ, ಚರಂಡಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಮುಂಬರುವ ಚುನಾವಣೆಯಲ್ಲಿ ಗೆದ್ದು ಕ್ಯಾಬಿನೆಟ್ ಮಂತ್ರಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗ್ರಾಮ ಪಂಚಾಯತಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ರುದ್ರಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಬೆಳಗೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಉಮಾ ಜಗದೀಶ್,ಎಪಿಎಂಸಿ ಮಾಜಿ ಅಧ್ಯಕ್ಷ ಕವನ ಗೌಡ, ಗ್ರಾಮ ಪಂಚಾಯತಿ ಸದಸ್ಯ ರುದ್ರ ಕುಮಾರ್,ನಾಸಿಮ್ ಬಾನು ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷೆ ಮಂಜುಳಾ, ಗ್ರಾಮದ ಹಿರಿಯರಾದ ಮಲ್ಲೇಶ್ ಗೌಡ ಸೇರಿದಂತೆ ಮುಂತಾದವರು ಇದ್ದರು