ಸಕಲೇಶಪುರ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಗಾರ.
ಸಹಾಯಕ ಪೊಲೀಸ್ ಅಧೀಕ್ಷಕ ಮಿಥುನ್ ಹಾಗೂ ಇತರ ಅಧಿಕಾರಿಗಳಿಂದ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಾಹಿತಿ.
ಸಕಲೇಶಪುರ : ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ UPSC/KPSC/PSI ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಗಾರವನ್ನು ಪೋಲಿಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗುವ ಮುಖಾಂತರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಯು.ಪಿ.ಎಸ್.ಸಿ ಪರೀಕ್ಷೆಯನ್ನು ಯಾವ ರೀತಿ ಎದುರಿಸುವುದೆಂದು ಮಾಹಿತಿ ನೀಡಿದರು.
ಶಾಸಕ ಎಚ್.ಕೆ ಕುಮಾರಸ್ವಾಮಿ ಸಹ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಹಾಯಕ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇತ್ತೀಚೆಗಷ್ಠೆ ತಾಲೂಕಿನಿಂದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಆಯ್ಕೆಯಾದ ಅನುಷಾ ಸಹ ವೇದಿಕೆಯಲ್ಲಿದ್ದರು.
ಈ ಸಂಧರ್ಭದಲ್ಲಿ ತಹಸೀಲ್ದಾರ್ ಮೇಘನಾ, ವಲಯ ಅರಣ್ಯಾಧಿಕಾರಿ ಶಿಲ್ಪಾ, ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ದರ್ಶನ್, ವಿನಯ್ ಕುಮಾರ್ ಹಾಜರಿದ್ದರು.