ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ : ಟಿಕೆಟ್ ಆಕಾಂಕ್ಷಿಯಾಗಿ ಮುರಳಿ ಮೋಹನ್ ಅರ್ಜಿ ಸಲ್ಲಿಕೆ.
ಸಕಲೇಶಪುರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಮುರಳಿ ಮೋಹನ್ ಅವರು ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪಕ್ಷದ ಟಿಕೆಟ್ ಅಪೇಕ್ಷಿಸುವ ಅಪೇಕ್ಷಿತರು ಕೆಪಿಸಿಸಿ ಕಚೇರಿಗೆ ಬಂದು ನಿಯಮ ಪ್ರಕಾರ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹಾನುಬಾಳು ಬಾಸ್ಕರ್ ಹಾಗೂ ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗನಾಥ್ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಇದ್ದರು.
ಈ ಕುರಿತು ಮುರಳಿ ಮೋಹನ್ ಪ್ರತಿನಿಧಿಯೊಂದಿಗೆ ಮಾತನಾಡಿದ , ಕ್ಷೇತ್ರದ ನೂರಾರು ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಪಡೆದು ಈ ಬಾರಿಯ ಚುನಾವಣೆಯಲ್ಲಿ ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ
ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ಅರ್ಜಿ ಸಲ್ಲಿಸಿದ್ದೇನೆ. ಪಕ್ಷ ಪರಿಗಣಿಸುವ ವಿಶ್ವಾಸವಿದೆ. ಕಳೆದ 10 ವರ್ಷಗಳಿಂದ ಕ್ಷೇತ್ರದ ಜನರ ಜೊತೆ ಇದ್ದು ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ.ಇಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ. ಕಳೆದ ನಾಲ್ಕು ವರ್ಷಗಳಿಂದ ಪಕ್ಷ ಸೂಚಿಸಿದ ಎಲ್ಲಾ ಕಾರ್ಯಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ.
ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದಲ್ಲಿ ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ದುಡಿಯಲು ಬದ್ದನಾಗಿರುವುದಾಗಿ ತಿಳಿಸಿದ್ದಾರೆ.