ಮಾರ್ಚ್ 09 ರಂದು ಸಕಲೇಶಪುರಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮನ.
ಸಕಲೇಶಪುರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದ ಆವರಣದಲ್ಲಿ ಬೃಹತ್ ಸಮಾವೇಶಕ್ಕೆ ತಯಾರಿ.
ಸಕಲೇಶಪುರ : ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯದಲ್ಲಿ ಹಲವೆಡೆ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದ್ದು ಮಾರ್ಚ್ 9 ಗುರುವಾರ ಸಕಲೇಶಪುರ ತಾಲೂಕಿಗೆ ಆಗಮಿಸಲಿದೆ.
ಅಂದು ತಾಲೂಕಿನ ಬಿರಡಹಳ್ಳಿಯಿಂದ ಸಭಾ ಕಾರ್ಯಕ್ರಮ ನಡೆಯುವ ಸ್ಥಳದವರೆಗೂ 500ಕ್ಕೂ ಹೆಚ್ಚು ಬೈಕ್ ಗಳ ಮೂಲಕ ರ್ಯಾಲಿ ನೆ
ನಡೆಯಲಿದೆ.ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ರಾಜ್ಯ ಬಿಜೆಪಿ ನಾಯಕರು ಹಾಗೂ ವಿವಿಧ ಇಲಾಖೆಗಳ ಸಚಿವರಿಂದ ರೋಡ್ ಶೋ ನಡೆಯಲಿದೆ.
ಪಟ್ಟಣದ ಒಕ್ಕಲಿಗ ಸಮುದಾಯ ಭವನದ ಆವರಣದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ಇಂದು ತಾಲೂಕು ಬಿಜೆಪಿ ಕಚೇರಿಯಲ್ಲಿ ನೆಡೆದ ಸಭೆಯಲ್ಲಿ ನಿರ್ಧಾರಿಸಲಾಯಿತು.
ಕಾರ್ಯಕ್ರಮಕ್ಕೆ ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ, ನಾರಾಯಣ ಗೌಡ ಹಾಗೂ ರಾಜ್ಯ ಬಿಜೆಪಿ ನಾಯಕರಾದ ಈಶ್ವರಪ್ಪ, ಸೇರಿದಂತೆ ಇನ್ನಿತರ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇಂದು ನೆಡೆದ ಪೂರ್ವಭಾವಿ ಸಭೆಯಲ್ಲಿ ಸಭೆಯಲ್ಲಿ ಮಾಜಿ ಶಾಸಕರಾದ ಬಿ. ಆರ್ ಗುರುದೇವ್, ಎಚ್. ಎಂ ವಿಶ್ವನಾಥ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಕಲಾ, ಬಿಜೆಪಿ ಟಿಕೇಟ್ ಅಕಾಂಕ್ಷಿಗಳಾದ ಸಿಮೆಂಟ್ ಮಂಜುನಾಥ್, ನಾರ್ವೆ ಸೋಮಶೇಖರ್, ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಪ್ರತಾಪ್, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಪ್ರಸನ್ನ ಬಿಜೆಪಿ ಮುಖಂಡರಾದ ಜೈಪ್ರಕಾಶ್ ಸೇರಿದಂತೆ ವಿವಿಧ ಮೋರ್ಚಗಳ ಅಧ್ಯಕ್ಷರ ಪದಾಧಿಕಾರಿಗಳು ಹಾಗೂ ಪ್ರಧಾನ ಕಾರ್ಯದರ್ಶಿ ಕೊಲ್ಲಹಳ್ಳಿ ಬಾಲರಾಜ್ ಸೇರಿದಂತೆ ಮುಂತಾದವರಿದ್ದರು.