ಚೀರಿ ಚಿನ್ನವಳ್ಳಿ ಗ್ರಾಮಸ್ಥರ ಹೋರಾಟಕ್ಕೆ ಸ್ಪಂದಿಸಿದ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ.
ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಮೊಬೈಲ್ ಗೆ ದೂರವಾಣಿ ಕರೆ ಮಾಡಿದ ಸಚಿವರು.
ತಕ್ಷಣವೇ ಪ್ರತಿಭಟನಾ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿಗೆ ಸೂಚನೆ
ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿ ಒಡಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀರಿ ಚಿನ್ನಹಳ್ಳಿ ಗ್ರಾಮಸ್ಥರು ಮೂಲಭೂತ ಸೌಕರ್ಯಕ್ಕಾಗಿ ಕಳೆದೆರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ನೆನ್ನೆ ಸೋಮವಾರ ಗ್ರಾಮದಲ್ಲಿಯೇ ಮತದಾನ ಬಹಿಷ್ಕಾರದ ಬ್ಯಾನರ್ ಹಾಕಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.
ಇಂದು ಗ್ರಾಮಸ್ಥರ ತಾಳ್ಮೆ ಕಟ್ಟೆ ಹೊಡೆದು ನೂರಕ್ಕೂ ಹೆಚ್ಚು ಜನ ಗ್ರಾಮಸ್ಥರು ಸಕಲೇಶಪುರ ಪಟ್ಟಣದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ( ಎತ್ತಿನಹೊಳೆ) ಕಚೇರಿಗೂ ಮುಂಭಾಗ ಬೆಳಗ್ಗೆಯಿಂದಲೂ ಪ್ರತಿಭಟನೆ ನಡೆಸುತ್ತಿದ್ದರು ಸ್ಥಳಕ್ಕೆ ಆಗಮಿಸಿದ ಮಲೆನಾಡು ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಸಂಘಟನೆಯ ಕಾರ್ಯಕರ್ತರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ಕಾರ್ಯಕರ್ತರು ಗ್ರಾಮಸ್ಥರ ಪ್ರತಿಭಟನೆಗೆ ಸಾತ್ ನೀಡಿದ್ದರು.
ಪಟ್ಟು ಬಿಡದ ಸಂಘಟನೆ ಹಾಗೂ ಗ್ರಾಮಸ್ಥರು ಅಹೋ ರಾತ್ರಿ ಪ್ರತಿಭಟನೆಗೆ ಮುಂದಾಗಿದ್ದರು ಇದೀಗ ಮಲೆನಾಡು ರಕ್ಷಣಾ ಸೇನೆಯ ರಾಜ್ಯಧ್ಯಕ್ಷ ಸಾಗರ್ ಅವರ ಮೊಬೈಲ್ಗೆ ಕರೆ ಮಾಡಿದ್ದ ಸಚಿವರಿಗೆ ಸಾಗರ್ ಅವರು ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದರು. ಅಹೋರಾತ್ರಿ ಪ್ರತಿಭಟನೆಯಲ್ಲಿ ಮಹಿಳೆಯರು ಕೂಡ ಭಾಗವಹಿಸಿರುವುದರಿಂದ ಜಿಲ್ಲಾಧಿಕಾರಿಗಳು ತಕ್ಷಣವೇ ಪ್ರತಿಭಟನ ಸ್ಥಳಕ್ಕೆ ತೆರಳಿ ಗ್ರಾಮಸ್ಥರ ಹಾಗೂ ಸಂಘಟನೆಗಳ ಮೂಲವಲಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ