ಸಕಲೇಶಪುರ : 3 ನೇ ದಿನವು ಮುಂದುವರೆದ ಚೀರಿ ಚಿನ್ನಹಳ್ಳಿ ಗ್ರಾಮಸ್ಥರ ಪ್ರತಿಭಟನೆ.
ಸ್ಥಳಕ್ಕೆ ಶಾಸಕ ಎಚ್. ಕೆ ಕುಮಾರಸ್ವಾಮಿ ಭೇಟಿ.
ಪಟ್ಟಣದ ಎತ್ತಿನಹೊಳೆ ಕಚೇರಿ ಮುಂಭಾಗ ನಡೆಯುತ್ತಿರುವ ಪ್ರತಿಭಟನೆ.
ಸಕಲೇಶಪುರ : ರಸ್ತೆ ಹಾಗೂ ಮೂಲ ಸೌಕರ್ಯಕ್ಕಾಗಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀರಿ ಚಿನ್ನಹಳ್ಳಿ ಗ್ರಾಮಕ್ಕೆ ಕಳೆದ 75 ವರ್ಷಗಳಿಂದ ರಸ್ತೆ ಇಲ್ಲದೆ ಮಹಿಳೆಯರು, ಮಕ್ಕಳು ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಸೋಮವಾರ ಗ್ರಾಮದಲ್ಲಿ ಚುನಾವಣಾ ಬಹಿಷ್ಕರಿಸುವ ನಿಲುವು ಕೈಗೊಂಡು ಪ್ರತಿಭಟನೆ ನಡೆಸಿದ್ದರು. ಗ್ರಾಮದಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ ತಾಲೂಕು ಮಟ್ಟದ ಯಾವ ಅಧಿಕಾರಿಗಳು ಆಗಮಿಸದೆ ಉದಾಸೀನತೆ ತೋರಿದ್ದಕ್ಕೆ ಗ್ರಾಮಸ್ಥರು ರೊಚ್ಚಿಗೆದ್ದು ಪಟ್ಟಣದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಕಚೇರಿ ಮುಂಭಾಗ ಶಾಮಿಯಾನ ಹಾಕಿ ಅಹೋರಾತ್ರಿ ನಡೆಸಿದ್ದರು.
ಇಂದು ಬೆಳಿಗ್ಗೆ ಶಾಸಕ ಎಸ್ ಕೆ ಕುಮಾರಸ್ವಾಮಿ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಅಹವಾಲು ಕೇಳುತ್ತಿದ್ದ ವೇಳೆ ಗ್ರಾಮದ ಮಹಿಳೆಯರು ಶಾಸಕರಿಗೆ ತರಾಟೆಗೆ ತೆಗೆದುಕೊಂಡರು. ಇಷ್ಟು ವರ್ಷಗಳ ಕಾಲ ನಾವು ಭರವಸೆಯನ್ನು ಕೇಳುತ್ತ ಬಂದಿದ್ದೇವೆ. ನಮಗೆ ಭರವಸೆಗಳು ಬೇಡ ಪರಿಹಾರ ಬೇಕೆಂದು ಪಟ್ಟಿ ಹಿಡಿದು ಪ್ರತಿಭಟನೆ ಮುಂದುವರಿಸುವುದಾಗಿ ಶಾಸಕರಿಗೆ ಎಚ್ಚರಿಕೆ ನೀಡಿದರು.
ಗ್ರಾಮಸ್ಥರ ಸಮಸ್ಯೆ ಆಲಿಸಿದ ನಂತರ ಚುನಾವಣಾ ಬಹಿಷ್ಕಾರ ನಿರ್ಧಾರಕ್ಕೆ ಬಂದಿರುವ ಚೀರಿ ಚಿನ್ನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಲಿದ್ದೇನೆ. ರಸ್ತೆ ನಿರ್ಮಾಣದ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲಾಗುವುದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸುಪ್ರದಿಪ್ತ ಯಜಮಾನ್, ಮಲೆನಾಡು ರಕ್ಷಣಾ ಸೇನೆ ರಾಜ್ಯದ್ಯಕ್ಷ ಸಾಗರ್ ಜಾನೇಕೆರೆ,ಡಿವೈಎಸ್ಪಿ ಮಿಥುನ್, ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ್, ವೃತ ನಿರೀಕ್ಷಕ ರಾಜು,