ಸಕಲೇಶಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.
ಕಾನೂನು ಅರಿವು -ನೆರವು ಕಾರ್ಯಕ್ರಮಕ್ಕೆ ಚಾಲನೆ.
ಸಕಲೇಶಪುರ :ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ, ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಸನ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಕಲೇಶಪುರ ಇವರುಗಳ ಸಂಯುಕ್ತಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಕಾನೂನು ಅರಿವು -ನೆರವು ಕಾರ್ಯಕ್ರಮವನ್ನು ಬುಧುವಾರ ಪಟ್ಟಣದ
ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯದಿಶೇ ಧನಲಕ್ಷ್ಮೀ ಉದ್ಘಾಟಿಸಿದರು.
ನ್ಯಾಯಲಯದ ಮಹಿಳಾ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆಡೆಯಿತು
ಈ ಸಂಧರ್ಭದಲ್ಲಿ ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಸುಧೀರ್, ವಕೀಲರ ಸಂಘದ ಅಧ್ಯಕ್ಷ ಪ್ರದೀಪ್,ತಹಸೀಲ್ದಾರ್ ಮೇಘನಾ,ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೇಮ್ ಕುಮಾರ್,ಅನುಪಮಾ ಜಗವೇ,ಶಿಲ್ಪಾ ಅಪರ ಸರ್ಕಾರಿ ವಕೀಲ ನಂದನ್,ಕಾಫರ್ಡ್ ಆಸ್ಪತ್ರೆಯ ವೈಧ್ಯಾಧಿಕಾರಿ ನಿಶ್ಚಿತಾ, ಸಕಲೇಶಪುರ ವಕೀಲರ ಸಂಘದ ಕಾರ್ಯದರ್ಶಿ ತಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ. ಪಿ. ಒ ಹರಿಪ್ರಸಾದ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ವಕೀಲರು ಆರಕ್ಷಕ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.