Sunday, November 24, 2024
Homeಸುದ್ದಿಗಳುಸಕಲೇಶಪುರH3N2 Virus: ಕೊರೊನಾ ಬಳಿಕ ಮತ್ತೊಂದು ವೈರಸ್​, ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ.

H3N2 Virus: ಕೊರೊನಾ ಬಳಿಕ ಮತ್ತೊಂದು ವೈರಸ್​, ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ.

H3N2 Virus: ಕೊರೊನಾ ಬಳಿಕ ಮತ್ತೊಂದು ವೈರಸ್​, ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ.

ಹಾಸನ ಮೂಲದ ವೃದ್ಧ ಬಲಿ.

ಕೊರೋನಾ ಬಳಿಕ ರಾಜ್ಯದಲ್ಲಿ ಹೆಚ್ 3ಎನ್ 2 ವೈರಲ್​ ಆತಂಕ ಮೂಡಿಸಿದ್ದು, ಇದೀಗ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು ಸಂಭವಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಹೆಚ್​​3ಎನ್​​2 ವೈರಸ್​ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ H3N2 ವೈರಸ್ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಈವರೆಗೆ 6 ಮಂದಿಗೆ H​​3N​​2 ಸೋಂಕು ದೃಢಪಟ್ಟಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

RELATED ARTICLES
- Advertisment -spot_img

Most Popular