ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡುವರ ವಿರುದ್ದ ಕಠಿಣ ಕ್ರಮ: ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್
ಸಕಲೇಶಪುರ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಈ ಕ್ಷಣದಿಂದ ಜಾರಿಯಾಗಿದ್ದು ನೀತಿ ಸಂಹಿತೆ ಉಲ್ಲಂಘನೆ ಮಾಡುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ ಚುನಾವಣೆ ಆಯೋಗ ಇಂದು ಚುನಾವಣಾ ದಿನಾಂಕ ನಿಗದಿ ಮಾಡಿದೆ. ಸಕಲೇಶಪುರ ,ಆಲೂರು, ಕಟ್ಟಾಯದಲ್ಲಿ ಒಟ್ಟು 287 ಮತಗಟ್ಟೆಗಳಿದ್ದು ಒಟ್ಟು 6 ಚೆಕ್ ಪೋಸ್ಟ್ ಗಳಿವೆ ಎಂದು ಮಾಹಿತಿ ನೀಡಿದ್ದಾರೆ.