ಸಕಲೇಶಪುರ : ಕಡ್ಡಾಯವಾಗಿ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಕರೆ
ಸಕಲೇಶಪುರ : ತಾಲೂಕು ಪಂಚಾಯತಿ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಮೂಡಿಸಲು ಬೈಕ್ ಜಾಥಾ ಗುರುವಾರ ನೆಡೆಯಿತು.
ಪಂಚಾಯತಿ ಸ್ವೀಪ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಬೈಕ್ ಜಾಥಾ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದ ಸುಮಾರು 50ಕ್ಕೂ ಹೆಚ್ಚು ಬೈಕಿನಲ್ಲಿ ಪಟ್ಟಣದ ವಿವಿಧ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಲಾಯಿತು.
ಈ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ,ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದಾನ ಪವಿತ್ರ ಹಕ್ಕು. ಅದನ್ನು ವ್ಯರ್ಥವಾಗಿ ಕಳೆಯದೇ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ್, ಅಕ್ಷರ ದಾಸೋಹ ಇಲಾಖೆಯ ಮಂಜುನಾಥ್ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು