ಸಕಲೇಶಪುರ : ಶಿವಕುಮಾರ ಮಹಾಸ್ವಾಮಿಗಳ ಜನ್ಮ ದಿನಾಚರಣೆ.
ಶ್ರೀಗಳ ಸೇವೆಯನ್ನು ಸ್ಮರಣೆ : ಯುವ ಉದ್ಯಮಿ ಪುನೀತ್ ಬನ್ನಳ್ಳಿ ಅವರಿಂದ ಸರ್ವರಿಗೂ ದಾಸೋದ ವ್ಯವಸ್ಥೆ
ಸಕಲೇಶಪುರ: ‘ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ನಮ್ಮೆಲ್ಲರಿಗೂ ಮಾದರಿ. ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ದೇವರಾಜ್ (ದಿವಾನ್ ) ಅಭಿಪ್ರಾಯಪಟ್ಟರು.
ಶನಿವಾರ ಪಟ್ಟಣದ ಗುರುವೇಗೌಡ ಸಮುದಾಯದ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಶಿವಕುಮಾರ ಮಹಾಸ್ವಾಮಿಗಳ 116ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಲೆನಾಡು ವೀರಶೈವ ಸಮಾಜ, ವೀರಶೈವ ಯುವ ವೇದಿಕೆ, ಅಕ್ಕಮಹಾದೇವಿ ಮಹಿಳಾ ಸಮಾಜ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಪುಷ್ಪ ನಮನ ಸಲ್ಲಿಸಲಾಯಿತು.
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ತ್ರಿವಿಧ ದಾಸೋಹದ ಮೂಲಕ ಮನೆಮಾತಾಗಿದ್ದಾರೆ. ನಡೆದಾಡುವ ದೇವರೆಂದೇ ಹೆಸರುವಾಸಿಯಾಗಿದ್ದಾರೆ. ಸಾವಿರಾರು ಮಕ್ಕಳಿಗೆ ನೆರವಾಗಿದ್ದಾರೆ. ಹೀಗಾಗಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಹಾಗಾದರೆ ಮಾತ್ರ ಅವರ ಜಯಂತಿಗೆ ಅರ್ಥ ಬರುತ್ತದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು ಅಭಿಪ್ರಾಯಪಟ್ಟರು.
116ನೇ ಜಯಂತೋತ್ಸವ ಕಾರ್ಯಕ್ರಮದ ನಂತರ ಯುವ ಉದ್ಯಮಿ ಪುನೀತ್ ಬನ್ನಳ್ಳಿ ಹಾಗೂ ಸಮಾಜದ ಮುಖಂಡರಾದ ನರೇಶ್ ಅವರಿಂದ ಸರ್ವರಿಗೂ ದಾಸೋಹದ ವ್ಯವಸ್ಥೆ ಮಾಡಿದ್ದರು.
ಈ ಸಂಧರ್ಭದಲ್ಲಿ ಮಲೆನಾಡು ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿ ಧರ್ಮಪ್ಪ, ಅಕ್ಕಮಹಾದೇವಿ ಮಹಿಳಾ ಸಮಾಜದ ತಾಲೂಕು ಅಧ್ಯಕ್ಷ ಶಶಿಕಲಾ ಲೋಕೇಶ್, ವೀರಶೈವ ಯುವ ವೇದಿಕೆ ಅಧ್ಯಕ್ಷ ಹೆಚ್ ಬಿ ಶಶಿಕುಮಾರ್, ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಬೈರಮುಡಿ ಚಂದ್ರು, ಬಿಜೆಪಿ ಮುಖಂಡರಾದ ಸಿಮೆಂಟ್ ಮಂಜುನಾಥ್, ಗೊರೂರು ವೆಂಕಟೇಶ್, ಸಕಲೇಶಪುರ ವರ್ತಕರ ಸಂಘದ ಅಧ್ಯಕ್ಷ ಎಚ್, ಎಚ್ ಉದಯ್,ಟಿಎಪಿಎಂಎಸ್ ಅಧ್ಯಕ್ಷ ಶಶಿಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್ ಪತ್ನಿ ನಂದಿನಿ ಮುರುಳಿ ಮೋಹನ್,ಸೇರಿದಂತೆ ಎಲ್ಲಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.