ಸಕಲೇಶಪುರ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಾಳ್ಳುಪೇಟೆ ಭಾಗದ ಕಾರ್ಯಕರ್ತರು.
ಬಿಜೆಪಿ ಮುಖಂಡ ಬಾಳ್ಳು ಮಲ್ಲಿಕಾರ್ಜುನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ.
ಸಕಲೇಶಪುರ :ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ರವರವನ್ನು ಗಕೈಯನ್ನು ಬಲಪಡಿಸಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಹಲವು ಮಹಿಳಾ ಕಾರ್ಯಕರ್ತರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ತಾಲೂಕು ಬಿಜೆಪಿ ಮುಖಂಡ ಬಾಳ್ಳುಪೇಟೆ ಮಲ್ಲಿಕಾರ್ಜುನ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ್, ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜನಪರ ಆಡಳಿತ ಹಾಗೂ ಪಕ್ಷ ಕ್ಷೇತ್ರದ ಸಾಮಾನ್ಯ ಅಭ್ಯರ್ಥಿಗೆ ಟಿಕೆಟ್ ನೀಡಿರುವುದು ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳಿಸಲು ಉತ್ತಮವಾದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ಕಾರ್ಯಕರ್ತನಿಗೆ ಟಿಕೆಟ್ ನೀಡಿರುವುದರಿಂದ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಕಾರ್ಯಕರ್ತರು ಆ ಪಕ್ಷವನ್ನು ತೊರೆದು ಬಿಜೆಪಿ ಸೇರುತ್ತಿರುವುದು ಬಿಜೆಪಿ ಗೆಲುವಿಗೆ ನಿದರ್ಶನವಾಗಿದೆ. ತಾಲೂಕಿನ ಜನತೆ ಸ್ವಾಭಿಮಾನಕ್ಕಾಗಿ ಈ ಬಾರಿ ಮತ ಚಲಾಯಿಸುವಂತೆ ಕರೆ ನೀಡಿದರು.ಪಕ್ಷದ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಈ ಬಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಭರತ್, ಸುಗುಣ ಮಲ್ಲಿಕಾರ್ಜುನ್, ಬಾಳ್ಳುಪೇಟೆ ಶಕ್ತಿ ಕೇಂದ್ರದ ಅಧ್ಯಕ್ಷ ರವಿ,ಬಿಜೆಪಿ ಮುಖಂಡರಾದ ವೆಂಕಟೇಶ್, ಶಿವಕುಮಾರ್, ಬಸವರಾಜ್ ರಘು ಆಟೋ ಸೇರಿದಂತೆ ಮುಂತಾದವರಿದ್ದರು.