ಹೂ ನೀಡಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು
ಸಕಲೇಶಪುರ : ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಇಂದಿನಿಂದ ರಾಜ್ಯದ್ಯಂತ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಮಕ್ಕಳಿಗೆ ಹೂ ನೀಡುವ ಮೂಲಕ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಡಿ. ರಾಜ್ ಕುಮಾರ್, ಸದಸ್ಯರಾದ ವೀಣಾ, ಶಿಕ್ಷಕರಾದ ಪ್ರಸನ್ನ ಕುಮಾರಿ ತಸ್ಲೀಮ ಶಬಾನ ಸೇರಿದಂತೆ ಮುಂತಾದವರಿದ್ದರು.