ಕರ್ನಾಟಕ ಪಬ್ಲಿಕ್ ಸ್ಕೂಲ್, ಹೆತ್ತೂರು ಇಲ್ಲಿ ದಾಖಲಾತಿ ಆಂದೋಲನ, ಶಾಲಾಭಿವೃದ್ಧಿ ಸಮಿತಿ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ.
ಸಕಲೇಶಪುರ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಇಲಾಖೆಯ ಸೂಚನೆಯಂತೆ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ಶಾಲಾಭಿವೃದ್ಧಿ ಸಮಿತಿಯ ಸಭೆ ನಡೆಸಿ 2023-24ನೇ ಸಾಲಿನ ಪಠ್ಯ ಯೋಜನೆಗಳ ಕುರಿತು ಚರ್ಚಿಸಲಾಯಿತು. ಸರ್ಕಾರದಿಂದ ನೀಡಲಾಗುವ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆತ್ತೂರು, ಸಮಿತಿಯ ಸದಸ್ಯರು, ಪ್ರಾಂಶುಪಾಲ ಮಂಜುನಾಥ ಬಿ.ಡಿ., ಉಪಪ್ರಾಂಶುಪಾಲರಾದ ಶ್ರೀಮತಿ ಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಮ್ಮ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.