Sunday, November 24, 2024
Homeಸುದ್ದಿಗಳುಸಕಲೇಶಪುರಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ.

ಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ.

ಮಳಲಿ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ.

ಸಕಲೇಶಪುರ :ತಾಲೂಕಿನ ಮಳಲಿ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮದಲ್ಲಿ ಕಸವಿಲೇವಾರಿ ಘಟಕ ಸ್ಥಾಪನೆ ಮಾಡಿರುವುದು ಅವೈಜ್ಞಾನಿಕವಾಗಿದೆ ಕೂಡಲೆ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

   ಪಟ್ಟಣದ ಬಿ.ಎಂ ರಸ್ತೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ಹಾಗೂ ಸಮುದಾಯದ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾಕಾರರು ಉಪವಿಭಾಗಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ದಿನಾಂಕ 08/06/2023 ರಂದು ಗುರುವಾರ ಘಟಕ ನಿರ್ಮಿಸಿರುವ ಸ್ಥಳದಲ್ಲಿ ಗ್ರಾಮಸ್ಥರು ಶಾಂತಿಯುತವಾಗಿ ಪ್ರತಿಭಟನೆ ಮಾಡುವಾಗ ಪೊಲೀಸ್ ಇಲಾಖೆಯವರು ಊರಿನ ಸುಮಾರು 30 ಜನರನ್ನು ಬಂದನ ಮಾಡಿದ್ದು. ಮತ್ತು ಡಾ. ಬಿ. ಆರ್ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುತ್ತಾರೆ. ಸಕಲೇಶಪುರ-ಆಲೂರು-ಕಟ್ಟಾಯ ಕ್ಷೇತ್ರದ ಶಾಸಕರು, ಸಕಲೇಶಪುರ ಉಪ ವಿಭಾಗಾದ ಪೊಲೀಸ್ ಅಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿ ಮತ್ತು ಇಂಜಿನಿಯರ್ ಇವರುಗಳು ಗ್ರಾಮದಲ್ಲಿ ಪುರಸಭೆಯ ತ್ಯಾಜ್ಯವನ್ನು ಹಾಕಲು ಮುಂದಾಗುವ ಮುಖಾಂತರ ಅಲ್ಲಿರುವ ದಲಿತರನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದು ಕೂಡಲೇ ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

   ಈ ಸಂದರ್ಭದಲ್ಲಿ ಮಳಲಿ ಗ್ರಾ.ಪಂ ಅಧ್ಯಕ್ಷ ಸತೀಶ್, ಗ್ರಾ.ಪಂ‌ ಸದಸ್ಯ ಶಿವಕುಮಾರ್, ಮುಖಂಡರುಗಳಾದ ಮಳಲಿ ಶಿವಣ್ಣ, ಈರಯ್ಯ ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular