ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾಸಕ ಸಿಮೆಂಟ್ ಮಂಜುನಾಥ್ ಗೆ ಅಭಿನಂದನೆ.
ಸಕಲೇಶಪುರ : ಸಕಲೇಶಪುರ ತಾಲೂಕು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜುನಾಥ್ ರವರಿಗೆ ಅದ್ದೂರಿಯಾಗಿ ಅಭಿನಂದನೆ ಸಲ್ಲಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು,ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಭಿನಂದನೆಗೆ ನಾನು ಅಭಾರಿಯಾಗಿದ್ದೇನೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, ” ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು,” ಎಂಬ ಸತ್ಯವಾಕ್ಯವನ್ನು ಸಮಾಜಕ್ಕೆ ಸಾರಿದವರು.ಸಾಮಾಜಿಕ ಸಮಸ್ಯೆಗಳೇ ತುಂಬಿಕೊಂಡಿದ್ದ ಆ ಕಾಲದಲ್ಲಿ ನಾರಾಯಣ ಗುರುಗಳ ಪ್ರಭಾವ ಕರಾವಳಿಯಲ್ಲೂ ಆಯಿತು
ಇಂದು ನಾರಾಯಣ ಗುರುಗಳ ಜಾತಿ ನಮಗೆ ಮುಖ್ಯವಲ್ಲ. ಅವರ ನೀತಿ ಮುಖ್ಯ. ಚತುರ್ವರ್ಣ ವ್ಯವಸ್ಥೆಯ ಕರಾಳ ಕತೆಯ ವಿರುದ್ಧದ ಹೋರಾಟವೇ ನಾರಾಯಣ ಗುರುಗಳ ಸಮಾಜ ಸುಧಾರಣೆ ನಾವುಗಳು ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.
ತಮ್ಮ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕೈ ಹಿಡಿದಿದ್ದು ನನ್ನ ಗೆಲುವಿಗೆ ಸಹಕಾರಿಯಾಗಿದೆ ಎಂದರು.ಕ್ಷೇತ್ರದ ಮತದಾರರ ಆಶಯದಂತೆ ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರು ಬಾಬು ಪೂಜಾರಿ, ತಾಲೂಕು ಅಧ್ಯಕ್ಷ ಭಾಸ್ಕರ್,ಕಾರ್ಯದರ್ಶಿ ಶಿವು, ಸಹ ಕಾರ್ಯದರ್ಶಿ ಕೃಷ್ಣಪ್ಪ, ಖಜಾಂಚಿ ದಿನೇಶ್, ಕುಂಬರಡಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಸೇರಿದಂತೆ ಇತರರು ಹಾಜರಿದ್ದರು.