ಮಳಲಿ ಗ್ರಾಮ ಪಂಚಾಯಿತಯ ಸಭಾಂಗಣ ಉದ್ಘಾಟಿಸಿದ ಶಾಸಕ ಸಿಮೆಂಟ್ ಮಂಜುನಾಥ್.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ಸಕಲೇಶಪುರ : ಮಳಲಿ ಗ್ರಾಮ ಪಂಚಾಯಿತಿಯ ಸಭಾಂಗಣವನ್ನು ಸೋಮವಾರ ಶಾಸಕ ಸಿಮೆಂಟ್ ಮಂಜುನಾಥ್ ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು ಜನಪ್ರತಿನಿಧಿಗಳು ಗೆಲುವುವುದು ಮುಖ್ಯವಲ್ಲ ನಮಗೆ ಸಿಕ್ಕಂತ ಅಧಿಕಾರ ಅವಧಿಯ ಎಷ್ಟು ಸಾಧನೆ ಮಾಡಿದ್ದೇವೆ ಎನ್ನುವುದು ಬಹು ಮುಖ್ಯ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನೆಡೆಸುತ್ತೇನೆ. ಅಭಿವೃದ್ಧಿಗಾಗಿ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡೋಣ.ಸಭಾಂಗಣವನ್ನು ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಇದೆ ವೇಳೆ ನೂತನ ಶಾಸಕರಿಗೆ ಮಳಲಿ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮಳಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸತೀಶ್ ಶೆಟ್ಟಿ,ಉಪಾಧ್ಯಕ್ಷೆ ಅಣ್ಣಮ್ಮ,ಪ್ರಭಾರ ತಹಸೀಲ್ದಾರ್ ಮೋಹನ್ ಅಣ್ಣಪ್ಪ,ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಆದಿತ್ಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.