Sunday, April 20, 2025
Homeಸುದ್ದಿಗಳುಸಕಲೇಶಪುರಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ಕೊಡುಗೆ ನೀಡಿದ ರಘು ಪಾಳ್ಯ

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ಕೊಡುಗೆ ನೀಡಿದ ರಘು ಪಾಳ್ಯ

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ಕೊಡುಗೆ ನೀಡಿದ ರಘು ಪಾಳ್ಯ.

 ಕರವೇ ಜಿಲ್ಲಾ ಕಾರ್ಯದರ್ಶಿಯ ಕಾರ್ಯಕ್ಕೆ ಶಾಲಾ ಅಭಿವೃದ್ಧಿ ಸಮಿತಿ, ಪೋಷಕರು ಶಿಕ್ಷಕರ ವತಿಯಿಂದ ಅಭಿನಂದನೆ ಸಲ್ಲಿಕೆ

15 ವರ್ಷದಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ರಘು ಪಾಳ್ಯರವರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಆಲೂರು : ತಾಲೂಕಿನ ಪಾಳ್ಯ ಹೋಬಳಿ ಗುಂಡನಬೆಳ್ಳೂರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಹಾಗೂ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ರಘು ಪಾಳ್ಯ.

 ಸುಮಾರು 15 ವರ್ಷಗಳಿಂದ ಸಕಲೇಶಪುರ ಹಾಗೂ ಆಲೂರು ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕಲಿಕಾ ಸಾಮಗ್ರಿ ಹಾಗೂ ಶಾಲೆಗೆ ಅವಶ್ಯಕತೆ ಇರುವ ಪರಿಕರಗಳನ್ನು ನೀಡುತ್ತಾ ಬಂದಿರುವ ರಘು ಪಾಳ್ಯವರಿಗೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

 ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಘು ಪಾಳ್ಯ,ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ನೆರವು ನೀಡುವ ಮೂಲಕ ಶಾಲೆಗಳ ಬಲವರ್ಧನೆಗೆ ಕೊಡುಗೆ ನೀಡಬೇಕು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪತ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಇ.ಸಿ.ಓ ರುದ್ರೇಶ್, ಬಿ. ಆರ್. ಸಿ ಸಿ ಆರ್ ಪಿ ವಿನೋದ್ ಮುಖ್ಯ ಶಿಕ್ಷಕರಾದ ದೇವೇಂದ್ರಪ್ಪ ಸೇರಿದಂತೆ ಸಹ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರು ಹಾಗೂ ಪೋಷಕರು ಹಾಜರಿದ್ದರು

RELATED ARTICLES
- Advertisment -spot_img

Most Popular