ಬಾಳ್ಳುಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಧೀಡಿರ್ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್.
ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗ ಹರಡದಂತೆ ಸಿಬ್ಬಂದಿಗಳು ನಿಗಾ ವಹಿಸುವಂತೆ ಸೂಚನೆ.
ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಸಿಮೆಂಟ್ ಮಂಜುನಾಥ್ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗದ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾದ ಹಿನ್ನೆಲೆಯಲ್ಲಿ ಶಾಸಕರು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದು ಮಕ್ಕಳ ಆರೋಗ್ಯದ ಕಡೆ ಪೋಷಕರು ಹೆಚ್ಚಿನ ನಿಗಾ ವಹಿಸುವಂತೆ ಈ ವೇಳೆ ಕಿವಿಮಾತು ಹೇಳಿದರು. ಭೇಟಿ ವೇಳೆ ಆಸ್ಪತ್ರೆಯ ಲ್ಯಾಬ್, ಔಷಧಿಗಳ ಶೇಖರಣ ಕೊಠಡಿ, ರೋಗಿಗಳ ಬೆಡ್, ಶೌಚಾಲಯ ಸೇರಿದಂತೆ ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ಪಶು ಚಿಕಿತ್ಸಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವೆಂಕಟೇಶ್, ಶಿವಕುಮಾರ್,ರಘುನಾಥ್, ಪ್ರದೀಪ್ ನಿಡನೂರು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.