ಸಕಲೇಶಪುರ: ದೀಕ್ಷಾ ಭೂಮಿಯಾತ್ರೆ ಚಾಲನೆ
ಸಕಲೇಶಪುರ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಶೈಲಿ ಮತ್ತು ಒವರ ಸಿದ್ದಾಂತವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೊತೆಗೆ ಮಾಡಿದ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡಿಯಬೇಕಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
ಡಾ. ಬಿ ಆರ್ ಅಂಬೇಡ್ಕರ್ ಅವರು ಮಾಹಾನ್ ಜ್ಞಾನಿಗಳು. ಅವರ ಆದರ್ಶ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಹಾಗಾಗಿ ನಾವು ಅವರ ಜೀವನ ಶೈಲಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಮಾತನಾಡಿ, ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂಬೇಡ್ಕರ್ ಅವರ ಅನುಯಾಯಿಗಳಿಗೆ ದೀಕ್ಷಾಭೂಮಿ ಯಾತ್ರೆ ಎಂಬ ಕಾರ್ಯಕ್ರಮ ಮಾಡಿ ಅಂಬೇಡ್ಕರ್ ದೀಕ್ಷಾ ಪಡೆದ ಸ್ಥಳಕ್ಕೆ ಕಳುಹಿಸಿಕೊಡಲಾಗುತ್ತಿದೆ. ಈ ವರ್ಷ ಅ.22 ರಿಂದ 26 ರವರೆಗೆ ಯಾತ್ರೆ ನೆಡೆಯಲಿದೆ.ತಾಲೂಕಿನಿಂದ 54 ಜನರನ್ನು ಅಂಬೇಡ್ಕರ್ ಅವರ ದೀಕ್ಷಾ ಸ್ಥಳಕ್ಕೆ ಕಳುಹಿಸಲಾಗುತ್ತಿದೆ ಎಂದರು.