ಸಕಲೇಶಪುರ ಇಂದು ನ್ಯಾಯಬೆಲೆ ಅಂಗಡಿಗಳು ಬಂದ್.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಪಡಿತರ ವಿತರಕರ ಸಂಘ.
ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಈ ನಡುವೆ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನ.7ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಘ ಕರೆ ಕೊಟ್ಟಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದ್ದು ಸಕಲೇಶಪುರ ತಾಲೂಕಿನ ಪಡಿತರ ವಿತರಕರು ಬೆಂಬಲ ಸೂಚಿಸಿದ್ದು ಇದರಿಂದ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಬಂದ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಪಡಿತರ ವಿತರಕರು ಅಂಗಡಿಯನ್ನು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಾಲೂಕು ಪಡಿತರ ವಿಚಾರ ಸಂಘದ ಅಧ್ಯಕ್ಷ ಕರಗೂರು ರಾಮಚಂದ್ರ ಹಾಗೂ ಕಾರ್ಯದರ್ಶಿ ಹಲಸುಲಿಗೆ ನಿಖಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಸುಮಾರು 61ಕ್ಕೂ ಹೆಚ್ಚು ಪಡಿತರ ವಿತರಕರು ಪ್ರತಿಭಟನೆಯಲ್ಲಿ ಭಾಗವಹಿಸಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಸರ್ಕಾರ ಕೂಡಲೇ ಪಡಿತರ ವಿತರಕರ ಬೇಡಿಕೆಗಳನ್ನು ಈಡೇರಿಸಲಿ ಎಂದು ಜನರು ಆಗ್ರಹಿಸಿದ್ದಾರೆ.