ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆ ಉಳಿವು’
ಸಕಲೇಶಪುರ : ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕಾದರೆ, ಶಿಕ್ಷಕರು, ಎಸ್‌ಡಿಎಂಸಿ ಹಾಗೂ ಮಕ್ಕಳ ಪೋಷಕರು ಪರಸ್ಪರ ಒಗ್ಗೂಡಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದಾಗ ಮಾತ್ರ ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಸೋಮವಾರ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ಮತ್ತು ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು,
ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಆಸ್ಪತ್ರೆಗಳು ಸ್ವಯಂಪೂರ್ಣವಾದರೆ ದೇಶದಲ್ಲಿನ ಶೇ.90ರಷ್ಟು ಸಮಸ್ಯೆಗಳು ಪರಿಹಾರವಾದಂತೆಯೇ. ಹಾಗಾಗಿ ನಾವು ಅವುಗಳ ಸಮಸ್ಯೆಗಳು ಮತ್ತು ಪರಿಹಾರದ ಕುರಿತಾಗಿ ಗಂಭೀರವಾಗಿ ಯೋಚಿಸಿ ಕಾರ್ಯಪ್ರವೃತ್ತರಾಗಬೇಕಾದ ಸಮಯವಿದು.ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರಿ ಶಾಲೆ ಪ್ರತಿಯೊಬ್ಬರಿಗೂ ಜೀವನದ ಪಾಠವನ್ನು ಕಲಿಸುತ್ತದೆ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು. ಶಾಲೆ ಅಭಿವೃದ್ಧಿಗೆ ಸಾರ್ವಜನಿಕರು, ಗ್ರಾಮದ ಆರ್ಥಿಕ ಸ್ಥಿತಿವಂತರು ಹಾಗೂ ಖಾಸಗಿ ಕಂಪನಿ, ಕಾಫಿ ಎಸ್ಟೇಟ್ ಮಾಲೀಕರ ಸಹಕಾರ ಬಹು ಮುಖ್ಯ.ದೇಶದ ಸಮಗ್ರ ಅಭಿವದ್ಧಿಯಲ್ಲಿ ದೊಡ್ಡ ಕಂಪನಿಗಳ ಪಾತ್ರವಿದ್ದು, ಕಂಪನಿಗಳ ಏಳಿಗೆಗೆ ದೇಶವಾಸಿಗಳ ಕೊಡುಗೆ ಇರುತ್ತದೆ. ನೆಲ-ಜಲ ಸಂಪನ್ಮೂಲ ಬಳಕೆ ಮಾಡಿಕೊಳ್ಳುವ ಕಂಪನಿಗಳು ಗಳಿಕೆಯ ಹಣದಲ್ಲಿ ಒಂದು ಭಾಗವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ನೀಡಬೇಕು
ಸಿಮೆಂಟ್ ಮಂಜು. ಶಾಸಕ
ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್,ಶಾಲಾ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.