ಕರ್ನಾಟಕ ಬಂದ್ ಗೆ ಸಕಲೇಶಪುರದಲ್ಲಿ ಬೆಂಬಲವಿಲ್ಲ.
ಸಕಲೇಶಪುರ : ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಸಂಚಾರ ಸಾರ್ವಜನಿಕರ ಓಡಾಟ
ಎಂದಿನಂತೆಯೇ ಇದೆ.ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬೆಂಗಳೂರು, ಮೈಸೂರು ಜಿಲ್ಲೆಗಳಿಗೆ ಎಂದಿನಂತೆ ಬಸ್, ಆಟೋ ಸಂಚಾರ ಮತ್ತು ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹೊಟೇಲ್ಗಳು ಕೂಡ ಓಪನ್ ಆಗಿವೆ.ಅಹಿತಕರ ಘಟನೆ ನಡೆಯದಂತೆ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಮುಖ ಸಂಘಟನೆಗಳಾದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ), ಕರವೇ (ಪ್ರವೀಣ್ ಶೆಟ್ಟಿ) ಬಣ ಹಾಗೂ ಮಲೆನಾಡು ರಕ್ಷಣಾ ಸೇನೆ ಸೇರಿದಂತೆ ಯಾವ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ ಸಿಕ್ಕಿಲ್ಲ.
ಒಟ್ಟಾರೆಯಾಗಿ ಕನ್ನಡಪರ ಸಂಘಟನೆಗಳು, ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ತಾಲೂಕಿನ್ಯಾದಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.