ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಹೋದ ಮನೆಗೆ ಶಾಸಕರ ಭೇಟಿ ಹಾಗೂ ವೈಯುಕ್ತಿಕ ಧನ ಸಹಾಯ
ಸಕಲೇಶಪುರ:ಶಾರ್ಟ್ ಸರ್ಕ್ಯೂಟ್ ನಿಂದ ಹಾನಿಗೀಡಾದ ಮನೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ಮಾಡಿ ವೈಯುಕ್ತಿಕ ಧನ ಸಹಾಯ ಮಾಡಿದರು.
ಪಟ್ಟಣದ ಅಗ್ರಹಾರ ಬಡಾವಣೆಯಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ಭಾಗ್ಯ ಲಕ್ಷ್ಮಣ್ ಎಂಬವರ ಮನೆಗೆ ತಗುಲಿ ಮನೆಯಲ್ಲಿದ್ದ ಹಲವಾರು ವಸ್ತುಗಳು ಸುಟ್ಟು ಹೋಗಿದ್ದು ಈ ಹಿನ್ನೆಲೆಯಲ್ಲಿ ಶಾಸಕರಾದ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ಮಾಡಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ



