,ಸಕಲೇಶಪುರ/ವಳಲಹಳ್ಳಿ : ನಿರಂತರ ಕಾಡಾನೆ ಹಾವಳಿ ಹೆಚ್ಚಾಗಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಅನುಮತಿ ಕೋರಿದ ವಿವಿಧ ಸಂಘ ಸಂಸ್ಥೆಗಳು,
ದಿನಾಂಕ ೦2.12.2022ರ ಶುಕ್ರವಾರ ಸಕಲೇಶಪುರ ತಾಲ್ಲೂಕು, ಹೆತ್ತೂರು ಹೋಬಳಿ , ವಳಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಿರಿಯರು ವಲಹಳ್ಳಿ ಕೂಡಿಗೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಕಾಡಾನೆ ಹಾವಳಿ ಯನ್ನು ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸದರಿ ಪ್ರತಿಭಟನೆಯಲ್ಲಿ ಬೆಳೆಗಾರರ ಸಂಘ, ಗ್ರಾಮಪಂಚಾಯಿತಿ ವ್ಯಾಪ್ತಿಯ ರೈತರುಗಳು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಈ ಭಾಗದ ಎಲ್ಲಾ ಚುನಾಯಿತ ಪ್ರತಿಸಿಧಿಗಳು, ಸ್ತ್ರೀಶಕ್ತಿ ಸಂಘ ಹಾಗೂ ಧರ್ಮಸ್ಥಳ ಸಂಘ ಎಲ್ಲಾ ಒಟ್ಟುಗೂಡಿ ಬೃಹತ್ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಿದ್ದಾರೆ.ಹಾಗಾಗಿ ಪ್ರತಿಭಟನೆಗೆ ಅನುಮತಿ ಕೋರಿ ಪೊಲೀಸ್ ಉಪ ಅಧೀಕ್ಷಕರು, ತಹಸೀಲ್ದಾರ್, ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.