ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಅಗ್ರಹಹಿಸಿ ಬೃಹತ್ ಪ್ರತಿಭಟನೆಗೆ ಚಾಲನೆ.
ವಳಲಹಳ್ಳಿಯ ರಸ್ತೆಗಳಲ್ಲಿ ಮೆರವಣಿಗೆ ನೆಡೆಸುತ್ತಿರುವ ಪ್ರತಿಭಟನಾಕಾರರು.
ಸಕಲೇಶಪುರ : ಕಾಡಾನೆ ಹಾವಳಿಯಿಂದ ಮಲೆನಾಡು ಭಾಗದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಬಗ್ಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಹಿನ್ನೆಲೆಯಲ್ಲಿ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ರೈತ ಸಂಘಟನೆ ಕನ್ನಡ ಪರ ಸಂಘಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು, ಸ್ಥಳೀಯ ಜನಪ್ರತಿನಿಧಿಗಳು, ಬೆಳೆಗಾರರ ಸಂಘ,ಸ್ವಸಹಾಯ ಸಂಘ,ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಘ,ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ, ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.