ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಹೆತ್ತೂರಿನ ಸಹನಾ ಮಹಿಳಾ ಸಂಘದಿಂದ ಶಾಸಕ ಎಚ್. ಕೆ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.
ಸಕಲೇಶಪುರ ತಾಲ್ಲೂಕು, ಹೆತ್ತೂರು ಹೋಬಳಿ, ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೂರು, ವಳಲಹಳ್ಳಿ, ಕೂಡಿಗೆಯಲ್ಲಿ ನಿರಂತರ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ.
ಹೀಗೆ ಏಳೆಂಟು ತಿಂಗಳುಗಳಿಂದ ರೈತರು ತಮ್ಮ ಜಮೀನಿನಲ್ಲಿ ಕೃಷಿ ಬೆಳೆಯಾದ ಭತ್ತ, ಕಾಫಿ, ಏಲಕ್ಕಿ, ಅಡಿಕೆ, ಮೆಣಸು ಇತ್ಯಾದಿ ಬೆಳೆಗಳನ್ನು ಬೆಳೆದಿದ್ದು ಸುಮಾರು 15 ರಿಂದ 20 ಆನೆಗಳು ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದು ಮತ್ತು ಬೆಳಗಿನ ಸಮಯ ಆ ಕಾಡಾನೆಗಳು ಓಡಾಡುತ್ತಿರುವುದರಿಂದ ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಲು ಭಯಬೀತರಾಗಿದ್ದಾರೆ ಹಾಗೂ ಶಾಲಾ ಮಕ್ಕಳು ಶಾಲೆಗೆ ಹೋಗಲು ತೊಂದರೆಯಾಗುತ್ತಿದೆ. ಮೂರ್ನಾಲ್ಕು ವರ್ಷಗಳಿಂದ ಕೋವಿಡ್‌ನಂತಹ ಮಾರಕ ಕಾಯಿಲೆ ಬಂದು ಮತ್ತು ಅತಿವೃಷ್ಟಿ ಯಿಂದ ರೈತರು ತುಂಬಾ ಆರ್ಥಿಕ ಸಂಕಷ್ಟ ಇಷ್ಟೊಂದು ತೊಂದರೆಯನ್ನು ಅನುಭವಿಸುತ್ತಿದ್ದರೂ ಯಾವೊಬ್ಬ ಅಧಿಕಾರಿ ವರ್ಗದವರಾಗಲಿ, ಜನಪ್ರತಿನಿಧಿಗಳಾಗಲಿ, ಅರಣ್ಯ ಇಲಾಖೆಯವರಾಗಲಿ ರೈತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಲು ವಿಫಲವಾಗಿದ್ದಾರೆ ಆದ್ದರಿಂದ ಶಾಸಕರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಒತ್ತಡ ತಂದು ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಉಜ್ಮರುಜ್ವಿಸುದರ್ಶನ್,ರಮ್ಯಾ, ನಾಗರತ್ನ, ಆಶಾ ಸೇರಿದಂತೆ ಮುಂತಾದವರಿದ್ದರು.